ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುತ್ಪಾಡಿ ಹಾಗೂ ಎಸ್ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಉಡುಪಿ ವತಿಯಿಂದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಆರೋಗ್ಯಕರ ಜೀವನಶೈಲಿ ವಿಷಯದ ಕುರಿತು ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಆರೋಗ್ಯಭಾರತಿ ಉಡುಪಿ ಸಹಯೋಗದಲ್ಲಿ ಸೆ.11ರಂದು ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಆರೋಗ್ಯಭಾರತಿ ಸಹಸಂಘಟನಾ ಕಾರ್ಯದರ್ಶಿ ಡಾ. ಮುರಳಿ ಕೃಷ್ಣ ಅವರು ಆರೋಗ್ಯಕರ ಜೀವನಕ್ಕಾಗಿ ಪಾಲಿಸಬೇಕಾದ ಆಹಾರ ಕ್ರಮ ಹಾಗೂ ಉತ್ತಮ ಜೀವನಶೈಲಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ವೈಯಕ್ತಿಕ ಅನುಭವಗಳು ಹಾಗೂ ಪ್ರಸ್ತುತ ಜೀವನಶೈಲಿಯ ಉದಾಹರಣೆಗಳೊಂದಿಗೆ ಆಯುರ್ವೇದದ ಕೊಡುಗೆಗಳನ್ನು ಪರಿಚಯಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಆರೋಗ್ಯಭಾರತಿಯ ಶ್ರೀ ರಾಘವೇಂದ್ರ ರಾವ್, ಕರ್ನಾಟಕ ರಾಜ್ಯ ಕಾರ್ಯದರ್ಶಿ ಶ್ರೀ ಗಂಗಾಧರ, ರಾಜ್ಯ ಖಜಾಂಚಿ ಪುರುಷೋತ್ತಮ ದೇವಸ್ಯ, ಮಂಗಳೂರು ವಿಭಾಗದ ಸಂಯೋಜಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಶರೀರ ಕ್ರಿಯಾ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ. ಸುಧೀಂದ್ರ ಆರ್. ಮೊಹರೆರ್ ಅತಿಥಿಗಳನ್ನು ಸ್ವಾಗತಿಸಿದರು. ಸ್ನಾತಕ ವಿದ್ಯಾರ್ಥಿನಿ ಕು. ನಿಧಿ ಕಲನ್ ನಿರೂಪಣೆ ಹಾಗೂ ವಂದನಾರ್ಪಣೆ ನೆರವೇರಿಸಿದರು. ಶರೀರ ಕ್ರಿಯಾ ವಿಭಾಗದ ಸಹಪ್ರಾಧ್ಯಾಪಕಿ ಡಾ. ಅರ್ಪಣಾ ಕೆ. ಹಾಗೂ ಸಂಹಿತಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಧನಶ್ರೀ ಪಾಟೀಲ್ ಕಾರ್ಯಕ್ರಮ ನಿರ್ವಹಿಸಿದರು.


