Thursday, March 5, 2026

spot_img

ಆರ್.ಬಿ.ಐ, ಲೀಡ್ ಬ್ಯಾಂಕ್ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕ್ ಆಶ್ರಯದಲ್ಲಿ ವಿಶೇಷ ಶಿಬಿರ

ಉಡುಪಿ : ಭಾರತ ಹಣಕಾಸು ಸಚಿವಾಲಯದ ಮಾರ್ಗಸೂಚಿ ಅನ್ವಯ ದೀರ್ಘ ಕಾಲದವರೆಗೆ ಹಕ್ಕು ಪಡೆಯದೇ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಹಾಗೂ ಷೇರುಗಳನ್ನು ಅವರ ವಾರಸುದಾರರಿಗೆ ಕಾನೂನುಬದ್ದವಾಗಿ ಹಸ್ತಾಂತರಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪಂಚಾಯತ್, ಆರ್.ಬಿ.ಐ, ಲೀಡ್ ಬ್ಯಾಂಕ್ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕುಗಳ ಆಶ್ರಯದಲ್ಲಿ ವಿಶೇಷ ಶಿಬಿರವು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು.

 ಶಿಬಿರವನ್ನು ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನಿಶ್ಚಿತ್ ಹೆಗ್ಡೆ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 78 ಕೋಟಿ ರೂ ಮೌಲ್ಯ, ನಿಷ್ಕ್ರಿಯಗೊಂಡ ಖಾತೆಗಳಿವೆ. ಆ ಖಾತೆಯಲ್ಲಿರುವ ಹಣವನ್ನು ವಾರಿಸುದಾರರಿಗೆ ತಲುಪಿಸುವ ಉದ್ದೇಶದಿಂದ

ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಎಂದ ಅವರು,  ಜಿಲ್ಲೆಯ  ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ ಡಿಸೆಂಬರ್ 31 ರ ವರೆಗೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದ್ದು, ಜನರು ಇದರ ಸದುಪಯೋಗಪಡೆದುಕೊಳ್ಳಬಹುದಾಗಿದೆ ಎಂದರು.

ಇದೇ ಸಂಧರ್ಭದಲ್ಲಿ ಕೆನರಾ0 ಬ್ಯಾಂಕ್ ವತಿಯಿಂದ ಠೇವಣಿ ಪಡೆಯುವ ಕುರಿತಾದ ಮಾಹಿತಿಯುಳ್ಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. ಶಿಬಿರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ಎಸ್ ಕಾದ್ರೊಳ್ಳಿ, ಆರ್.ಬಿ.ಐ ನ ಂGM ನಿಶಾ ಠಾಕೂರ್, ಕೆನರಾ ಬ್ಯಾಂಕ್ ನ ಅರ್ಚನಾ, ಲೀಡ್ ಬ್ಯಾಂಕ್ ಮೆನೇಜರ್ (ಪ್ರಭಾರ) ಕೆ. ಎಸ್.ಮಹಾದೇವಪ್ಪ, ಉಡುಪಿ ಜಿಪಂ ಯೋಜನಾಧಿಕಾರಿ ವಿಜಯ್ ಕುಮಾರ್ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕಿನ ಅಧಿಕಾರಿಗಳು, ಎಲ್.ಐಸಿ ಅಧಿಕಾರಿಗಳು ಗ್ರಾಹಕರು ಉಪಸ್ಥಿತರಿದ್ದರು. ಶಿಬಿರದಲ್ಲಿ ಗ್ರಾಹಕರು, ಬ್ಯಾಂಕ್ ಅಧಿಕಾರಿಗಳು ಆರ್.ಬಿ.ಐ ಅಧಿಕಾರಿಗಳೊಂದಿಗೆ ಮಾಹಿತಿ ಹಂಚಿಕೊಂಡರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles