Thursday, April 2, 2026

spot_img

ಉಡುಪಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ : ನಿವೃತ್ತ ಸಿಬ್ಬಂದಿಗೆ ವೈದ್ಯಕೀಯ ನೆರವು ವಿತರಣೆ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆಯನ್ನು ಉಡುಪಿಯ ಚಂದು ಮೈದಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜ ದಿನಾಚರಣೆಯ ಅಂಗವಾಗಿ ನಡೆದ ಗೌರವ ವಂದನೆಯನ್ನು ನಿವೃತ್ತ ಮಹಿಳಾ ಪೊಲೀಸ್ ನಿರೀಕ್ಷಕರಾದ ಸುಜಾತ ಸಾಲಿಯಾನ್ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಬಂದ ವೈದ್ಯಕೀಯ ಸಹಾಯ ಅರ್ಜಿಗಳ ಆಧಾರದ ಮೇಲೆ ಒಟ್ಟು ರೂ. 13,08,050 ಮೊತ್ತದ ವೈದ್ಯಕೀಯ ಧನ ಸಹಾಯ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ ಎಸ್ ನಾಯ್ಕ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಭಾಗವಾಗಿ ನಡೆದ ಪಥಸಂಚಲನಕ್ಕೆ ಆರ್‌ಪಿಐ ರವಿ ಕುಮಾರ್ (ಡಿಎಆರ್‌, ಉಡುಪಿ) ನೇತೃತ್ವ ವಹಿಸಿದ್ದರು. ಯೋಗೀಶ್ ನಾಯ್ಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles