Thursday, May 7, 2026

spot_img

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ನಾಗೇಶ್‌ ಎಂ ನಿಧನ..

ಉಡುಪಿ  : ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್‌)ಯ ಎಆರ್‌ಎಸ್‌ಐ ನಾಗೇಶ್‌ ಎಂ. ಅವರು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದರು. ಕಳೆದ ಒಂದು ವರ್ಷದಿಂದ ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಮೂಲತಃ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪದ್ಮನೂರು ಗ್ರಾಮದವರಾದ ನಾಗೇಶ್‌ ಎಂ. ಅವರು ಪ್ರಸ್ತುತ ಉಡುಪಿಯಲ್ಲಿ ವಾಸವಾಗಿದ್ದರು. 1996ರ ಅಕ್ಟೋಬರ್‌ 10ರಂದು ಮಂಗಳೂರಿನ ಡಿಎಆರ್‌ನಲ್ಲಿ ಸೇವೆಗೆ ನೇಮಕಗೊಂಡ ಅವರು, ಬಳಿಕ ಉಡುಪಿ ಜಿಲ್ಲೆ ರಚನೆಯಾದ ಸಂದರ್ಭದಲ್ಲಿ ಉಡುಪಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದರು.

ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ಶಿಸ್ತು ಹಾಗೂ ಕರ್ತವ್ಯನಿಷ್ಠೆಯಿಂದ ಗುರುತಿಸಿಕೊಂಡಿದ್ದ ಅವರು, ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. 2016ರ ಡಿಸೆಂಬರ್‌ 17ರಂದು ಪದೋನ್ನತಿ ಹೊಂದಿ ಎಆರ್‌ಎಸ್‌ಐ ಹುದ್ದೆಗೆ ಏರಿದ್ದರು.

ಅವರ ನಿಧನದಿಂದ ಪೊಲೀಸ್‌ ಇಲಾಖೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಸಹೋದ್ಯೋಗಿಗಳು ಹಾಗೂ ಸ್ನೇಹಿತರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles