ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿಯ ಸ್ಥಾಪಕ ವಿಶ್ವನಾಥ್ ಶೆಣೈ ಅವರು ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದರು. ಕಾಲೇಜಿನ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳಿಗೆ ನೆರವಾಗುವ ಉದ್ದೇಶದಿಂದ ನೀಡಲಾದ ಕುರ್ಚಿಗಳನ್ನು ವಿಶ್ವನಾಥ್ ಶೆಣೈ ಅವರು ಕಾಲೇಜಿನ ಆಡಳಿತಾಧಿಕಾರಿ ಶ್ರೀಧರ್ ಪೈ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಪೈ, ಉಪ ಪ್ರಾಂಶುಪಾಲರಾದ ಡಾ. ವಿಶ್ವನಾಥ್ ಪೈ, ಪಿಯು ಕಾಲೇಜಿನ ಪ್ರಾಂಶುಪಾಲರಾದ ಮಾಲತಿ ದೇವಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಹಾಗೂ ಸಾಹಿತಿ ಅಂಶುಮಾಲಿ ಉಪಸ್ಥಿತರಿದ್ದರು.

ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಗೆ ಸಮಾಜಮುಖಿ ಸಂಘಟನೆಗಳು ಹಾಗೂ ದಾನಿಗಳ ಸಹಕಾರ ಮಹತ್ವದ್ದಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದ್ದು, ಕೊಡುಗೆ ನೀಡಿದ ವಿಶ್ವನಾಥ್ ಶೆಣೈ ಅವರಿಗೆ ಕೃತಜ್ಞತೆ ಸಲ್ಲಿಸಿತು.



