Friday, June 26, 2026

spot_img

ಎಂಡಿಎಂಎ ಮಾರಾಟ ಆರೋಪ: ಯುವಕ ಬಂಧನ, ರೂ 1.52 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ : ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ರೂ 1.52 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ವಾಹನ ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂಬಾತನನ್ನು ಬಂಧಿಸಿದೆ. ಆರೋಪಿ ಮೂಲತಃ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ನಿವಾಸಿಯಾಗಿದ್ದಾನೆ.

ಬಂಧಿತನಿಂದ 1 ಗ್ರಾಂ 3 ಮಿಲಿಗ್ರಾಂ ತೂಕದ ಎಂಡಿಎಂಎ, ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ 1.52 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles