Thursday, November 5, 2026

spot_img

ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮಕ್ಕೆ ಗೃಹ ಇಲಾಖೆಗೆ ಒತ್ತಾಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಹಿರಿಯಡ್ಕದ ಪ್ರದೀಪ್ ಪೂಜಾರಿ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕಿರುವುದು ತಪ್ಪು. ಈ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಗೆ ಒತ್ತಾಯಿಸಿರುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನೊಂದವರಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ. ಘಟನೆ ನಡೆದ ದಿನವೇ ಹಿರಿಯಡ್ಕದಲ್ಲಿರುವ ಪ್ರದೀಪ್ ಪೂಜಾರಿ ಅವರ ಮನೆಗೆ ಭೇಟಿ ನೀಡಿ, ತಾಯಿ, ಸಹೋದರ, ಕುಟುಂಬದ ಸದಸ್ಯರು ಹಾಗೂ ಬಂಧುಗಳಿಗೆ ಸಾಂತ್ವನ ಹೇಳಿದ್ದೆ. ಅಲ್ಲಿಂದಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ, ಪ್ರದೀಪ್ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೆ ಎಂದು ಅವರು ಹೇಳಿದರು.

ಹಲ್ಲೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿರುವ ಪೊಲೀಸರ ನಡೆ ಸರಿಯಲ್ಲ. ಇಂತಹ ಕರ್ತವ್ಯ ಲೋಪಗಳಿಗೆ ಸಂಬಂಧಿಸಿದಂತೆ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles