Monday, June 1, 2026

spot_img

ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ರೌಡಿ ಶೀಟರ್ ಗಣೇಶ್ ಇರಿಸಲು ಜಿಲ್ಲಾಡಳಿತ ಆದೇಶ..

ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗಣೇಶ್ (32) ಎಂಬಾತನ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ನೇತಾಜಿನಗರ 4ನೇ ಅಡ್ಡರಸ್ತೆ, ಬಡಗಬೆಟ್ಟು ಗ್ರಾಮದ ನಿವಾಸಿಯಾಗಿರುವ ಗಣೇಶ್ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಬಂಧನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆರೋಪಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಕಳ್ಳತನ ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಪೈಕಿ ಮೂರು ಪ್ರಕರಣಗಳು ಖುಲಾಸೆಯಾಗಿದ್ದು, ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ. ಉಳಿದ ಎರಡು ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ.

ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯನ್ನು ಪರಿಗಣಿಸಿ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಲಾಗಿದ್ದು, ಆರೋಪಿಯನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles