Tuesday, May 5, 2026

spot_img

ಕಾರಂತರ ಬದುಕಿನ ಶಿಸ್ತು, ಉತ್ಸಾಹ ಹಿರಿಯ ನಾಗರಿಕರಿಗೆ ಮಾದರಿ : ನಿತ್ಯಾನಂದ ಪಡ್ರೆ

ಉಡುಪಿ : ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಬೇಕು ಎಂಬ ದೃಢ ನಿಲುವು ಡಾ. ಶಿವರಾಮ ಕಾರಂತರಲ್ಲಿ ಇತ್ತು. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಸಮಾಜಮುಖಿ ಚಳುವಳಿಗಳವರೆಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಇಳಿವಯಸ್ಸಿನಲ್ಲಿಯೂ ಜೀವನೋತ್ಸಾಹ ಮತ್ತು ಕೆಲಸದ ನಿಷ್ಠೆಯನ್ನು ಉಳಿಸಿಕೊಂಡಿದ್ದರು. ಅವರ ಬದುಕಿನ ರೀತಿ ಇಂದಿನ ಹಿರಿಯ ನಾಗರಿಕರಿಗೆ ಮಾದರಿಯಾಗಿದೆ ಎಂದು ಉದಯವಾಣಿಯ ವಿಶ್ರಾಂತ ಹಿರಿಯ ಉಪಸಂಪಾದಕ ನಿತ್ಯಾನಂದ ಪಡ್ರೆ ಹೇಳಿದರು.

 ಅವರು ಬ್ರಹ್ಮಗಿರಿಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್, ಹಿರಿಯ ನಾಗರಿಕರ ಸಂಘ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ “ಕಾರಂತ ಉಪನ್ಯಾಸ ಮತ್ತು ಬಹುಮಾನ ವಿತರಣಾ ಸಮಾರಂಭ”ದಲ್ಲಿ ಕಾರಂತರ ಬದುಕು-ಬರಹಗಳು ಹಿರಿಯ ನಾಗರಿಕರಿಗೆ ಮಾದರಿ ವಿಷಯದ ಕುರಿತು ಉಪನ್ಯಾಸ ನೀಡಿದರು ಕಾರ್ಯಕ್ರಮವನ್ನು ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಕೆ. ಮುರಳಿಧರ್ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಾತನಾಡಿ, ಕಾರಂತರ ಕಾದಂಬರಿಗಳ ಓದು ಹಿರಿಯ ನಾಗರಿಕರಲ್ಲಿ ಧೈರ್ಯ ಮತ್ತು ಬದುಕನ್ನು ಸ್ವೀಕರಿಸುವ ಮನೋಭಾವ ಬೆಳೆಸುತ್ತದೆ ಎಂದರು.

ಹಿರಿಯ ನಾಗರಿಕರಿಗಾಗಿ ಆಯೋಜಿಸಲಾದ ಡಾ. ಕಾರಂತ ಲೇಖನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಮಂಜುನಾಥ್ ಕಾಮತ್ ಹಾಗೂ ಸಂಕಯ್ಯ ಶೆಟ್ಟಿ ಕೆಂಜೂರು, ದ್ವಿತೀಯ ಸ್ಥಾನ ಪಡೆದ ಡಾ. ಪಿ. ಕೃಷ್ಣಪ್ರಸಾದ್ ಮತ್ತು ಗಿರಿಜಾ ಬ್ರಹ್ಮಾವರ, ತೃತೀಯ ಸ್ಥಾನ ಪಡೆದ ಸೋಮಶೇಖರ ರೆಡ್ಡಿ, ಗಿಲ್ಬರ್ಟ್ ಪಿಂಟೋ ಹಾಗೂ ಕರುಣಾ ಸುರೇಶ್ ಪೈ ಅವರಿಗೆ ಬಹುಮಾನ ವಿತರಿಸಲಾಯಿತು. ಕರ್ನಾಟಕ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸರೂರು ರಾಜೀವ ಶೆಟ್ಟಿ, ಚಿಂತಕ ಮುಷ್ತಾಕ್ ಹೆನ್ನಾಬೈಲ್ ಹಾಗೂ ಸದಾನಂದ ಹೆಗ್ಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟ್ ಸದಸ್ಯ ಜಿ.ಎಂ. ಶರೀಫ್ ಹೂಡೆ ಸ್ವಾಗತಿಸಿದರು. ಉಪನ್ಯಾಸಕಿ ಶಾಲಿನಿ ಯು.ಬಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles