Thursday, April 30, 2026

spot_img

ಕಾರ್ಕಳದಲ್ಲಿ ಹಿಂದೂ ವಿರೋಧಿ ಕೃತ್ಯಗಳ ವಿರುದ್ಧ ಆಕ್ರೋಶ: ತಹಶೀಲ್ದಾರರಿಗೆ ಹಿಂದೂ ಸಂಘಟನೆಗಳ ಮನವಿ..

ಉಡುಪಿ : ಕಾರ್ಕಳ ತಾಲೂಕಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಹಿಂದೂ ವಿರೋಧಿ ಕೃತ್ಯಗಳು ಹಾಗೂ ಹಿಂದೂಗಳ ಧಾರ್ಮಿಕ-ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆಯಾಗುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಕೈಗೊಂಡಿರುವ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟನೆ ಕೋರಿ ಹಿಂದೂ ಸಂಘಟನೆಗಳ ಮುಖಂಡರು ಕಾರ್ಕಳ ತಾಲೂಕು ಕಚೇರಿಯಲ್ಲಿ ತಹಶೀಲ್ದಾರರನ್ನು ಭೇಟಿ ಮಾಡಿದರು.

 ನಿಯೋಗವು ತಹಶೀಲ್ದಾರರೊಂದಿಗೆ ನಡೆಸಿದ ಚರ್ಚೆಯಲ್ಲಿ, ಕಾರ್ಕಳ ತಾಲೂಕಿನಲ್ಲಿ ನಿರಂತರವಾಗಿ ಗೋ ಹತ್ಯೆ, ಅಕ್ರಮ ಗೋ ಸಾಗಾಟ ಹಾಗೂ ಅಕ್ರಮ ಕಸಾಯಿಖಾನೆಗಳಿಗೆ ಸಂಬಂಧಿಸಿದ ಪ್ರಕರಣಗಳು ವರದಿಯಾಗುತ್ತಿದ್ದರೂ, ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬ ಆರೋಪವನ್ನು ಮುಂದಿಟ್ಟರು. ಇದರಿಂದ ಕಾನೂನಿನ ಭಯವಿಲ್ಲದೆ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ ಎಂದು ಹೇಳಿದರು.

ಇಂತಹ ನಿರ್ಲಕ್ಷ್ಯದ ಪರಿಣಾಮವಾಗಿ ಇತ್ತೀಚೆಗೆ ಪರಶುರಾಮ ಥೀಮ್ ಪಾರ್ಕ್ನಲ್ಲಿ ನಡೆದ ಕಳ್ಳತನ ಪ್ರಕರಣವೂ ಸಮಾಜದಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ನಿಯೋಗವು ಅಭಿಪ್ರಾಯಪಟ್ಟಿತು. ಇದುವರೆಗೆ ನಡೆದ ಎಲ್ಲಾ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ಯಾವ ರೀತಿಯ ಕಾನೂನು ಕ್ರಮ ಕೈಗೊಂಡಿದೆ ಎಂಬ ಬಗ್ಗೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಈ ಸಂಬಂಧ ವಿಶ್ವ ಹಿಂದೂ ಪರಿಷದ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಸಂಘಟನೆಗಳ ನಿಯೋಗವು ಮಾನ್ಯ ತಹಶೀಲ್ದಾರರಿಗೆ ಲಿಖಿತ ಮನವಿ ಸಲ್ಲಿಸಿ, ಸಂಬಂಧಿತ ಪ್ರಕರಣಗಳಲ್ಲಿ ಕಠಿಣ ಹಾಗೂ ನಿರಪೇಕ್ಷ ತನಿಖೆ ನಡೆಸುವಂತೆ ಒತ್ತಾಯಿಸಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles