Monday, September 21, 2026

spot_img

ಕೀಟನಾಶಕ ಸೇವನೆ ಬಳಿಕ ವೃದ್ಧ ಸಾವು: ಕಾಪು ಠಾಣೆಯಲ್ಲಿ ಯುಡಿಆರ್‌ ಪ್ರಕರಣ

ಉಡುಪಿ: ಮಾನಸಿಕ ಖಿನ್ನತೆ ಹಾಗೂ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ 74 ವರ್ಷದ ವ್ಯಕ್ತಿಯೊಬ್ಬರು ಕೀಟನಾಶಕ ಸೇವಿಸಿದ ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಮಜೂರು ಗ್ರಾಮದಲ್ಲಿ ನಡೆದಿದೆ. ಮಜೂರು ಗ್ರಾಮದ ಜಿತೇಶ್‌ ಶೆಟ್ಟಿ ಅವರ ತಂದೆ ರಾಮಣ್ಣ ಶೆಟ್ಟಿ (74) ಅವರು ಕಳೆದ ಐದು ವರ್ಷಗಳಿಂದ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದರು. ಜೊತೆಗೆ ಮಾನಸಿಕ ಖಿನ್ನತೆ, ಹೃದಯ ಸಂಬಂಧಿ ಸಮಸ್ಯೆ ಹಾಗೂ ಡಯಾಲಿಸಿಸ್‌ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಸೆ.3ರಂದು ಮಧ್ಯಾಹ್ನ 1.30ರ ಸುಮಾರಿಗೆ ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಕೃಷಿ ಬಳಕೆಗೆ ಇರಿಸಿದ್ದ ಕೀಟನಾಶಕವನ್ನು ರಾಮಣ್ಣ ಶೆಟ್ಟಿ ಅವರು ಮಾನಸಿಕ ಖಿನ್ನತೆಯ ಹಿನ್ನೆಲೆಯಲ್ಲಿ ಕುಡಿಯಲು ಮುಂದಾಗಿದ್ದರು. ಇದನ್ನು ಗಮನಿಸಿದ ಅವರ ಸಹೋದರ ದಯಾನಂದ ಶೆಟ್ಟಿ ಅವರು ತಕ್ಷಣ ಬಾಟಲಿಯನ್ನು ಕಸಿದುಕೊಂಡಿದ್ದು, ಅಷ್ಟರೊಳಗೆ ಅಲ್ಪ ಪ್ರಮಾಣದ ಕೀಟನಾಶಕ ಬಾಯಿಯೊಳಗೆ ಹೋಗಿತ್ತು ಎನ್ನಲಾಗಿದೆ. ತಕ್ಷಣ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿ ಒಳರೋಗಿಯಾಗಿ ಇರಿಸಿಕೊಂಡಿದ್ದರು. ಸೆ.19ರಂದು ಸಂಜೆ 4.30ರ ಸುಮಾರಿಗೆ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಕರೆತರಲಾಗಿತ್ತು. ರಾತ್ರಿ 11ರ ಸುಮಾರಿಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮಾನಸಿಕ ಖಿನ್ನತೆಯಿಂದ ಕೀಟನಾಶಕ ಸೇವಿಸಿದ್ದರಿಂದ ಅಥವಾ ಮೊದಲಿನಿಂದಲೂ ಇದ್ದ ಅನಾರೋಗ್ಯದ ಕಾರಣದಿಂದ ಸಾವು ಸಂಭವಿಸಿರಬಹುದು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles