Monday, March 2, 2026

spot_img

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕ : ಸಚಿವ ಸಂತೋಷ್ ಲಾಡ್ ಭರವಸೆ

ಉಡುಪಿ : ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ ನೀಡಿದರು.

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಸ್ಪತ್ರೆಯಲ್ಲಿ ಖಾಯಂ ವೈದ್ಯರ ಕೊರತೆ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು. ಮೂರು ವಾರಗಳೊಳಗೆ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಅವರು ತಿಳಿಸಿದರು.

2015ರಿಂದ ಇಎಸ್‌ಐ ಆಸ್ಪತ್ರೆಯಲ್ಲಿ ಖಾಯಂ ವೈದ್ಯರು ಇಲ್ಲದೆ ನಿಯೋಜನೆ ಮೇರೆಗೆ ವೈದ್ಯರು ಕಾರ್ಯನಿರ್ವಹಿಸುತ್ತಿರುವುದರಿಂದ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ ಎಂದು ಶಾಸಕ ಕೊಡ್ಗಿ ಸದನದ ಗಮನಕ್ಕೆ ತಂದರು. ಇದೇ ವೇಳೆ ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆ ಹಾಗೂ ಕುಂದಾಪುರದ ಆದರ್ಶ ಆಸ್ಪತ್ರೆ ಹೆಸರು ಬಿಟ್ಟು ಹೋಗಿದ್ದರೆ, ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಲಾಡ್ ಹೇಳಿದರು. ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ ಅವಧಿಯನ್ನು ಎರಡು ವರ್ಷಕ್ಕೆ ವಿಸ್ತರಿಸಿದ್ದಕ್ಕೆ ಶಾಸಕ ಕೊಡ್ಗಿ ಅವರು ಕಾರ್ಮಿಕ ಸಚಿವರಿಗೆ ಧನ್ಯವಾದ ಸಲ್ಲಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles