Thursday, March 5, 2026

spot_img

ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗುಂಪುಗಳ ಸಹಾಯ ಪಡೆದು ಗೊಂದಲ ಸೃಷ್ಟಿ: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ

ಉಡುಪಿ : ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಸರಕಾರ ನೀಡಿದ ವರದಿಯನ್ನು ನಾನು ವಿರೋಧಿಸುತ್ತೇನೆ. ಈ ಪ್ರಕರಣದಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡಲಾಗಿದೆ, ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗುಂಪುಗಳ ಸಹಾಯ ಪಡೆದು ಕಾಲ್ತುಳಿತ ನಡೆದ ಸ್ಥಳದಲ್ಲಿ ಗೊಂದಲ ಸೃಷ್ಟಿಸಲಾಗಿದೆ, ಬೆಂಗಳೂರಿನಲ್ಲಿ ಸಕ್ರಿಯವಾಗಿರುವ ಸ್ಮಗ್ಲಿಂಗ್ ಮಾಫಿಯಾ ಇದರ ಹಿಂದಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಮಾಡಿದ್ದಾರೆ.

ಅವರು ಇಂದು ಉಡುಪಿಯಲ್ಲಿ ಮಾತಾನಾಡುತ್ತಾ, ಈ ಬಗ್ಗೆ ಮೆಜಿಸ್ಟರಿಯಲ್ ಎನ್ ಕ್ವಯರಿ ನಡೆಸುತ್ತಿರುವ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಗೆ ಪತ್ರ ಬರೆದಿದ್ದೇನೆ, ದಯಾನಂದ್ ಅವರು ಮುಂದೆ ಡಿಜಿಪಿ ಮತ್ತು ಐಜಿಪಿ ಆಗುವ ನೇಮಕವಾಗುವುದನ್ನು ತಡೆಯುವ ಉದ್ದೇಶ ಇದರಲ್ಲಿದೆ ಈ ಪ್ರಕರಣದ ಹಿಂದೆ ಇದೆ. ರಾನ್ಯ ರಾವ್ ಸ್ಮಗ್ಲಿಂಗ್ ಪ್ರಕರಣ ಮೂಲಕ ರಾಮಚಂದ್ರ ರಾವ್ ಅವರಿಗೆ ಹಿನ್ನಡೆಯಾಗುವಂತೆ ಮಾಡಲಾಯಿತು, ಒಳಸಂಚುಗಳನ್ನು ರೂಪಿಸಿ ಸಲೀಂ ಅವರನ್ನು ನೇಮಿಸಲಾಗಿದೆ. ಅಲೋಕ್ ಕುಮಾರ್ ಅವರ ಮೇಲೆ ಈಗಾಗಲೇ ಆರೋಪ ಹೊರಿಸಿ ದೂರ ವಿರಿಸಲಾಗಿದೆ, ದಯಾನಂದ್ ಮುಂದಿನ ಸೀನಿಯಾರಿಟಿ ಲೀಸ್ಟ್‌ ನಲ್ಲಿದ್ದಾರೆ. ದಯಾನಂದ್ ಅವರನ್ನು ಸಸ್ಪೆಂಡ್ ಮಾಡಿದ್ದು ಸಲೀಂ ಎಂದು ಅನುಪಮಾ ಶೆಣೈಪೊಲೀಸ್ ಇಲಾಖೆಯ ರಾಜಕೀಯ ಬಹಿರಂಗಪಡಿಸಿದರು.

ಮೇಲ್ನೋಟಕ್ಕೆ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡುವ ಹುನ್ನಾರ ಕಂಡುಬರುತ್ತದೆ, ವಿರಾಟ್ ಕೊಹ್ಲಿ ಅವರ ಸಾಮಾಜಿಕ ಜಾಲತಾಣ ವಿಡಿಯೋ ನೋಡಿ ಜನ ಬಂದಿದ್ದಾರೆ ಎನ್ನಲಾಗುತ್ತಿದೆ ಮತ್ತು ವರದಿಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಸಾಮಾಜಿಕ ಜಾಲತಾಣದ ವಿಡಿಯೋವನ್ನು ದೇಶವಿದೇಶಗಳಿಂದ ಲೂ ಲಕ್ಷಾಂತರ ಜನ ನೋಡುತ್ತಾರೆ, ಒಂದೇ ದಿನದಲ್ಲಿ ಜನ ವಿಮಾನ  ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರಾ? ವಿರಾಟ್ ಕೊಹ್ಲಿ ವಿಡಿಯೋ ನೋಡಿದವರೆಲ್ಲಾ ಕಾರ್ಯಕ್ರಮದ ಸ್ಥಳಕ್ಕೆ ಬಂದ ಬಗ್ಗೆ ಸಿದ್ದರಾಮಯ್ಯನವರಲ್ಲಿ ದಾಖಲೆ ಇದೆಯಾ? ಕೂಡಲೇ ಸಿಎಂ ಸಿದ್ದರಾಮಯ್ಯ ವಿರಾಟ್ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕು. ನಾನು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಬರೆದ ಪತ್ರವನ್ನು ಆರ್ಸಿಬಿ ಪರ ವಕೀಲರು ಪರಿಶೀಲಿಸಬೇಕು. ವಿರಾಟ್ ಕೊಹ್ಲಿಯನ್ನು ರಕ್ಷಿಸಬೇಕು ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles