Monday, July 6, 2026

spot_img

ಕೊಲ್ಲೂರು ದೇವಸ್ಥಾನದಲ್ಲಿ 80 ಸಾವಿರ ಕಳವು: 24 ಗಂಟೆಯಲ್ಲೇ ಮೂವರು ಮಹಿಳೆಯರ ಬಂಧನ..

ಉಡುಪಿ : ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಬಂದಿದ್ದ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ರೂ 80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ, ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಭದ್ರಾವತಿ ಮೂಲದ ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಅವರನ್ನು ಬಂಧತರು.

 ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ಅವರು ದೇವಸ್ಥಾನದ ಹೊರಾಂಗಣಕ್ಕೆ ಬಂದ ವೇಳೆ, ಬೆಳಿಗ್ಗೆ ಸುಮಾರು 8.20ಕ್ಕೆ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಅದರ ಜಿಪ್ ತೆರೆದಿದ್ದು, ಒಳಗಿದ್ದ ರೂ 80 ಸಾವಿರ ನಗದು ಹೊಂದಿದ್ದ ಪರ್ಸ್ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ದೇವಸ್ಥಾನದ ಸುತ್ತಮುತ್ತ ಹುಡುಕಾಟ ನಡೆಸಿದರೂ ಪರ್ಸ್ ಪತ್ತೆಯಾಗದ ಹಿನ್ನೆಲೆಯಲ್ಲಿ ನಿಮಿಶಾ ಅವರು ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಯಿತು. ಸಿಸಿಟಿವಿ ದೃಶ್ಯಾವಳಿಗಳು, ಸಾರ್ವಜನಿಕರು ತೆಗೆದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ನೆರವಿನಿಂದ ಆರೋಪಿಗಳನ್ನು ಪತ್ತೆಹಚ್ಚಿ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಪೊಲೀಸರ ತನಿಖೆಯಲ್ಲಿ ದುರ್ಗಮ್ಮ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಕಳವು ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಶಾರದ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ ಸೇರಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ದೇವಸ್ಥಾನಗಳಿಗೆ ಆಗಮಿಸುವ ಭಕ್ತರನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಜಾಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles