Monday, March 2, 2026

spot_img

ಕೊಲ್ಲೂರು ಮೂಕಾಂಬಿಕಾ ದೇವಳದ ಪಿಯು ಕಾಲೇಜು ತಂಡಕ್ಕೆ ರಾಜ್ಯ ಮಟ್ಟದ ನೆಟ್‌ಬಾಲ್ ಕಿರೀಟ..

ಉಡುಪಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ನೆಟ್‌ಬಾಲ್‌ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿಯು ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ದೇವಳದಲ್ಲಿ ಸನ್ಮಾನಿಸಲಾಯಿತು.

 ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಯಲ್ಲಿ ರಾಷ್ಟ್ರಮಟ್ಟದ ಸಾಧನೆ ಸಾಧಿಸಿರುವುದು ಹೆಮ್ಮೆ ತಂದಿದೆ. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕವಾದ ಅಂಶ. ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಉಪ ಕಾರ್ಯನಿರ್ವಾಹಣಾಧಿಕಾರಿ ಐ.ಎಚ್. ತುಂಬಿಗೆ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಲಿಂಗ ನಾಯ್ಕ್, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ, ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ (ಹೊಸಮಠ), ತಂಡದ ವ್ಯವಸ್ಥಾಪಕ ನಾಗರಾಜ್ ಅಡಿಗ (ನೀಲಾವರ), ತರಬೇತುದಾರ ಸಚಿನ್ ಕುಮಾರ್ ಶೆಟ್ಟಿ (ಹುಂಚಿನಿ), ರಾಜ್ಯಮಟ್ಟದ ತೀರ್ಪುಗಾರ ಅವಿನಾಶ್ ಆಚಾರ್ಯ, ಕೀರ್ತನ ಸಿಗಂದೂರು, ಮಣಿಕಂಠ ಸಿಗಂದೂರು ಮತ್ತು ಗಣೇಶ್ ನಿಟ್ಟೂರು ಉಪಸ್ಥಿತರಿದ್ದರು.

ತದನಂತರ ತಂಡದ ನಾಯಕ ಗಣೇಶ್ ಆರ್ ಮತ್ತು ಸದಸ್ಯರಾದ ನಿರೂಪ, ರೋಹಿತ್, ಯಶಸ್, ದಿಗಂತ, ಸುಬ್ರಮಣ್ಯ, ಸಚಿನ್ ಹಾಗೂ ಕಾರ್ತಿಕ್ ಅವರನ್ನು ತೆರೆದ ವಾಹನದ ಮೂಲಕ ದೇವಳದಿಂದ ಮುಖ್ಯರಸ್ತೆ ಮಾರ್ಗವಾಗಿ ಕಾಲೇಜಿನ ತನಕ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು. ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಊರಿನ ನಾಗರಿಕರು ವಿಜೇತರನ್ನು ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles