Monday, October 26, 2026

spot_img

ಕೋಟ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಸೈಕಲ್ ಸವಾರ ಆರ್‌ಎಸ್‌ಎಸ್ ಮುಖಂಡ ಸ್ಥಳದಲ್ಲೇ ಸಾವು

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ, ಸ್ಥಳೀಯ ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೋಟ ಮಣೂರು ನಿವಾಸಿ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ. ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ಗಾಯಗೊಂಡ ಕಾರು ಚಾಲಕ ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಎಂದು ತಿಳಿದುಬಂದಿದೆ. ಸೋಮವಾರ ಬೆಳಿಗ್ಗೆ ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್ ಸಮೀಪ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಕಾರು ಸೈಕಲ್‌ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಸೈಕಲ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಗುರುದಾಸ್ ಶೆಣೈ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಪರಿಣಾಮ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋಟ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles