ಕೋಟ: ಸರಕಾರಿ ಕ್ಷೇತ್ರದಲ್ಲಿ ಹೊಸ ಮೇಲಿಗೈಲು ಸ್ಥಾಪಿಸಿರುವ ಕೋಟ ಸಹಕಾರಿ ವ್ಯವಸಾಯಕ ಸಂಘ ಮೇ 18ರಂದು ಹೊಸ ಶಾಖೆಯೊಂದಿಗೆ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ. ಕೋಟ ಸಹಕಾರಿ ವ್ಯವಸಾಯಕ ಸಂಘದ ಮಣೂರು ಶಾಖೆಯ ನೂತನ ಶಾಖಾ ಕಟ್ಟಡ, ಗೋದಾಮು ಮತ್ತು ವಸತಿ ಸಂಕೀರ್ಣ ಲೋಕಾರ್ಪಣೆ ಸಮಾರಂಭ ಮೇ.18.ರಂದು ಪೂರ್ವಾಹ್ನ ಗಂಟೆ 10.00ಕ್ಕೆ ಸಂಘದ ಮಣೂರು ಶಾಖಾ ವಠಾರದಲ್ಲಿ ನಡೆಯಲಿದ್ದು, ನೂತನ ಕಟ್ಟಡವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ ಉದ್ಘಾಟಿಸಲಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭದ್ರತಾ ಕೊಠಡಿ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಗೋದಾಮು ಕಟ್ಟಡವನ್ನು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ವಾಣಿಜ್ಯ ಸಂಕೀರ್ಣವನ್ನು ಕರ್ನಾಟಕ ಸರಕಾರದ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ಇವರು ವಹಿಸಲಿದ್ದಾರೆ.

ಸಹಕಾರ ರಶ್ಮಿ ನಗದುಪತ್ರವನ್ನು ಕುಂದಾಪುರ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಡುಗಡೆಗೊಳಿಸಲಿದ್ದಾರೆ. ಭದ್ರತಾ ಕೋಶವನ್ನು ರೋಟರಿ ವಲಯ-7ರ ಆರ್‍ಪಿಐಸಿ ಮತ್ತು ಜಿಲ್ಲಾ ಸಲಹೆಗಾರರಾದ ಪಿ.ಡಿ.ಜಿ. ಅಭಿನಂದನ್ ಎ. ಶೆಟ್ಟಿ, ಕೃಷಿ ಉತ್ಪನ್ನ ದಾಸ್ತಾನು ಮಳಿಗೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನಿರ್ದೇಶಕ ಬೆಳಪು ದೇವಿಪ್ರಸಾದ ಶೆಟ್ಟಿ, ಸಭಾಭವನವನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಪಡಿತರ ವಿಭಾಗವನ್ನು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್, ಕುಂದಾಪುರ ಇದರ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಗಣಕ ಯಂತ್ರವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನಿರ್ದೇಶಕ ಮಹೇಶ ಹೆಗ್ಡೆ ಮೊಳಹಳ್ಳಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ. ಆರ್. ನವೋದಯ ಸಮೃದ್ಧಿ ಸ್ವಸಹಾಯ ಸಂಘಗಳಿಗೆ ಸುತ್ತುನಿಧಿ ಹಸ್ತಾಂತರಿಸಲಿದ್ದಾರೆ. ವಸತಿ ಸಂಕೀರ್ಣವನ್ನು ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ ಉದ್ಘಾಟಿಸಲಿದ್ದಾರೆ. ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಫಲಾನುಭವಿಗಳಿಗೆ ಚೆಕ್ ಹಸ್ತಾಂತರಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ನಾಗರಾಜ್ ಹಂದೆ ಸಹಿತ ನಿರ್ದೇಶಕರು ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ನಂತರ ಮಧ್ಯಾಹ್ನ ಘಂಟೆ 2.30ರಿಂದ ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ “ಕೀಚಕ ವಧೆ” ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.