Friday, March 6, 2026

spot_img

ಕೋಡಿ ಕುಷ್ಠ ಗಾಣಿಗ ನಿಧನ.

ಕುಂದಾಪುರ: ತೆಂಕು, ಬಡಗು ಉಭಯತಿಟ್ಟುಗಳ ಹಿರಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೋಡಿ ಕೃಷ್ಣ (ಕುಷ್ಠ) ಗಾಣಿಗ (78) ಇಂದು ಕುಂದಾಪುರ ತಾಲೂಕಿನ ಕೋಡಿಯಲ್ಲಿರುವ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಹೆರಂಜಾಲು ವೆಂಕಟರಮಣ ಗಾಣಿಗರಿಂದ ಬಡಗುತಿಟ್ಟಿನ ಹೆಜ್ಜೆಗಾರಿಕೆಯನ್ನು, ಪಡ್ರೆ ಚಂದು ಅವರಿಂದ ತೆಂಕುತಿಟ್ಟಿನ ನಾಟ್ಯಭ್ಯಾಸವನ್ನು ಕಲಿತು, ಓರ್ವ ಪ್ರಸಿದ್ಧ ಸ್ತ್ರೀ ವೇಷಧಾರಿಯಾಗಿ ಕಲಾಭಿಮಾನಿಗಳ ಅಭಿಮಾನಕ್ಕೆ ಪಾತ್ರರಾಗಿದ್ದರು. ದೇವಿ, ನಂದಿನಿ, ಸುಭದ್ರೆ, ಮಂಡೋದರಿ, ದ್ರೌಪದಿ, ಕಯಾದು, ಸೀತೆ, ಅಂಬೆ, ದಮಯಂತಿ, ಮಾಯಾಪೂತನಿ, ಮಾಯಾಶೂರ್ಪನಖಿ, ಚಂದ್ರಮತಿ ಹೀಗೆ ಸ್ತ್ರೀಪಾತ್ರದ ನವರಸಗಳಲ್ಲಿಯೂ ನಿಸ್ಸೀಮರು. ಪುರುಷ ವೇಷಗಳಾದ ಪರಶುರಾಮ, ವಿಷ್ಣು, ಕೃಷ್ಣ ಪಾತ್ರಗಳನ್ನು ಮಾಡುತ್ತಿದ್ದರು. ಇವರು ಅಮೃತೇಶ್ವರೀ, ಮಾರಣಕಟ್ಟೆ, ಕಲಾವಿಹಾರ ಮೇಳ, ರಾಜರಾಜೇಶ್ವರೀ ಮೇಳ ಹಾಗೂ ಸುದೀರ್ಘವಾಗಿ ಕಟೀಲು ಮೇಳದಲ್ಲಿ ಒಟ್ಟು ಮೂರುವರೆ ದಶಕಗಳ ಕಾಲ ತಿರುಗಾಟವನ್ನು ಮಾಡಿದ್ದಾರೆ. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರ

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles