Thursday, October 23, 2025

spot_img

ಖ್ಯಾತಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಅವರಿಗೆ ಕೋಟ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ..

ಕೋಟ: ಕೋಟ ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ನಾಡು ಕಂಡ ಶ್ರೇಷ್ಠ ಪತ್ರಕರ್ತೆ ರಾಜ್ಯ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತೆ ವಿಜಯಲಕ್ಷ್ಮೀ ಶಿಬರೂರು ಇವರಿಗೆ ಗಣ್ಯರ ಸಮ್ಮುಖದಲ್ಲಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ.

 ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ನಡೆಯುವ ಸದ್ಭಾವನಾ 2025 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಈ ಬಾರಿ ನವೆಂಬರ್ 16 ರಂದು ಉಡುಪಿ ಜಿಲ್ಲೆಯ ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸುತ್ತಿದೆ. ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ 25 ಸಾವಿರ ಮೌಲ್ಯದ ಬೆಳ್ಳಿ ಫಲಕ ನೀಡಿ ಗೌರವಿಸುತ್ತಾ ಬಂದಿದೆ.

 ಇದೇ ವೇಳೆ ವಿಶೇಷ ಪುರಸ್ಕಾರವನ್ನು ವಿಶ್ವವಿಖ್ಯಾತ ರಥಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ಇವರಿಗೆ ನೀಡಲಿದೆ. ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ , ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಈ ವೇದಿಕೆಯಲ್ಲಿ ನೀಡಲಿದೆ. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತ ಗಣ್ಯರು ಭಾಗಿಯಾಗಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಪಂಚವರ್ಣ ಮಹಿಳಾ ಮಂಡಲದಿಂದ ಯಕ್ಷರೂಪಕ, ಮಯೂರಿ ನೃತ್ಯ ತಂಡ ಕುಂಭಾಶಿ ನೃತ್ಯ, ಸ್ಥಳೀಯ ಅಂಗನವಾಡಿ ಪುಟಾಣಗಳಿಂದ ಸಾಂಸ್ಕೃತಿಕ ಸಿಂಚನ, ಅವಿಭಜಿತ ಜಿಲ್ಲೆಗಳ ಪ್ರಸಿದ್ಧ ನಾಟಕ ತಂಡ ಚಾಪರ್ಕ ಕಲಾವಿದರಾದ ದೇವದಾಸ್ ಕಾಪಿಕಾಡ್ ಇವರ ಸಾಮಾಜಿಕ ಹಾಸ್ಯಮಯ “ಯಾರೂ ಗ್ಯಾರಂಟಿ ಅಲ್ಲಾ “ ನಾಟಕ ಪ್ರದರ್ಶನಗೊಳ್ಳಲಿದೆ ಎಂದು  ಸಂಘದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಹಾಗೂ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles