Monday, March 2, 2026

spot_img

ಗಾಂಧಿ-ಫ್ರಮ್‌ ಅ ಡಿಫರೆಂಟ್‌ ಪರ್ಸ್ಪೇಕ್ಟಿವ್ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿ ಇವರ ವತಿಯಿಂದ ಗಾಂಧಿ-ಫ್ರಮ್‌ ಅ ಡಿಫರೆಂಟ್‌ ಪರ್ಸ್ಪೇಕ್ಟಿವ್ ಎಂಬ ವಿಶೇಷ ಉಪನ್ಯಾಸವು ಬುಧವಾರ ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ನಡೆಯಿತು.

 ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್ ಉಪಸ್ಥಿತರಿದ್ದರು. ಎಂ.ಜಿ.ಎಂ. ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕರಾದ ವಿನಿತ್ ರಾವ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ತಮ್ಮ ಉಪನ್ಯಾಸದಲ್ಲಿ ಅವರು ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಇಂದಿನ ಸಮಾಜದಲ್ಲಿಯೂ ಹೇಗೆ ಪ್ರಸ್ತುತವಾಗಿವೆ ಎಂಬುದರ ಕುರಿತು ಆಳವಾದ ವಿಶ್ಲೇಷಣೆ ನೀಡಿದರು. ಗಾಂಧೀಜಿಯವರ ಅಹಿಂಸಾ, ಸತ್ಯ ಮತ್ತು ಸ್ವಾವಲಂಬನೆಯ ತತ್ವಗಳನ್ನು ಯುವ ಪೀಳಿಗೆಯು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಪ್ರಥಮ ಬಿಸಿಎ ವಿದ್ಯಾರ್ಥಿನಿ ಮಿಥಾಲಿ ಪೈ ಕಾರ್ಯಕ್ರಮದ ನಿರೂಪಣೆಯನ್ನು ನಿರ್ವಹಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles