Thursday, March 5, 2026

spot_img

ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನೆ

ಉಡುಪಿ : ಜಿಲ್ಲಾ ಗೃಹರಕ್ಷಕ ದಳ, ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ಯೆನೆಪೋಯ ವಿಶ್ವವಿದ್ಯಾಲಯ ಕುಲಪತಿ ಡಾ.ವಿಜಯ್ ಕುಮಾರ್ ಮಾತನಾಡಿ, ಶಿಸ್ತು, ತಾಳ್ಮೆ, ದಕ್ಷತೆ ಹಾಗೂ ಬದ್ಧತೆಗೆ ಹೆಸರಾಗಿರುವ ಗೃಹರಕ್ಷಕರುಗಳಿಗೆ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಅವರುಗಳು ದೈಹಿಕವಾಗಿ ಸದೃಢರಾಗಿ ಉತ್ತಮ ಆರೋಗ್ಯ ಹೊಂದುತ್ತಾರೆ. ಸೇವೆಯಲ್ಲಿ ತಂಡವಾಗಿ ಕೆಲಸ ಮಾಡಲು ಕ್ರೀಡೆ ಪ್ರೇರಣೆ ನೀಡಲಿದೆ ಎಂದರು.

 ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಗೃಹ ರಕ್ಷಕ ದಳವು ಪೊಲೀಸ್ ಪಡೆಯ ಮತ್ತೊಂದು ಪ್ರಮುಖ ವಿಭಾಗವಾಗಿದೆ. ಗೃಹರಕ್ಷಕರು ಹಗಲು-ರಾತ್ರಿಯೆನ್ನದೇ ತುರ್ತು ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳ ಆಯೋಜನೆ ಮನಸ್ಸಿಗೆ ಮುದ ನೀಡುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ. ಇಂದಿನ ಸೋಲು ಮುಂದಿನ ಗೆಲುವಿಗೆ ದಾರಿಯಾಗಲಿದೆ. ಪ್ರತಿಯೊಬ್ಬ ಗೃಹರಕ್ಷಕರು ಕ್ರೀಡಾ ಮನೋಭಾವದಿಂದ ಸಕ್ರೀಯವಾಗಿ ಸ್ಪರ್ಧೇಯಲ್ಲಿ ಭಾಗವಹಿಸಬೇಕು. ಕ್ರೀಡೆಯನ್ನು ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಗೃಹರಕ್ಷಕರಿಗೆ ಸಲಹೆ ನೀಡಿದರು

ಉಡುಪಿ, ಚಿಕ್ಕಮಗಳೂರು, ಕಾರವಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕ್ರೀಡಾಂಗಣಕ್ಕೆ ಸಂದೀಪ್ ಚಿಕ್ಕಮಗಳೂರು ಕ್ರೀಡಾಜ್ಯೋತಿ ತಂದರು. ಕ್ರೀಡಾ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ, ವೈದ್ಯೆ ಡಾ.ಶೃತಿ ಬಲ್ಲಾಳ, ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಡಾ.ರೋಶನ್ ಕುಮಾರ್ ಶೆಟ್ಟಿ, ವಿವಿಧ ಘಟಕಗಳ ಘಟಕಾಧಿಕಾರಿಗಳು, ಗೃಹರಕ್ಷಕ ದಳದ ಪುರುಷ ಹಾಗೂ ಮಹಿಳಾ ಗೃಹರಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಗೃಹರಕ್ಷಕದಳ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಸ್ವಾಗತಿಸಿ, ಬ್ರಹ್ಮಾವರ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ನಿರೂಪಿಸಿ, ಸ್ನೇಹ ಜಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles