Tuesday, March 3, 2026

spot_img

ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದಾಗ ಮಾತ್ರ ಫಲಪ್ರದ: ಅಶೋಕ್ ಕುಮಾರ್ ಕೊಡವೂರು

ಉಡುಪಿ: ಸರಕಾರದ ಗ್ಯಾರಂಟಿ ಯೋಜನೆಗಳ ಆಶಯ, ಕಾರ್ಯಕ್ರಮಗಳು ಮತ್ತು ಪ್ರಯೋಜನಗಳು ಜನಸಾಮಾನ್ಯರ ತಳಮಟ್ಟಕ್ಕೆ ತಲುಪಿದಾಗ ಮಾತ್ರ ಅವು ನಿಜವಾದ ಅರ್ಥದಲ್ಲಿ ಫಲಪ್ರದವಾಗುತ್ತವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಭಿಪ್ರಾಯಪಟ್ಟಿದ್ದಾರೆ.

 ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಲಾದ ಕಲಾಜಾಥಾ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಂವಿಧಾನದ ಆಶಯದಂತೆ ಸಮಾನತೆ ಮತ್ತು ಆತ್ಮಸ್ಥೈರ್ಯ ನೀಡುವ ದೃಷ್ಠಿಯಿಂದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವು ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಬೆಂಬಲವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ನಂತರ ಶ್ರೀ ಮಾರುತಿ ಕಲಾಸಂಘ ತೊಗಲು ಗೊಂಬೆ ತಂಡದಿಂದ ಗ್ಯಾರಂಟಿ ಯೋಜನೆಗಳ ಕುರಿತು ತೊಗಲು ಗೊಂಬೆಯಾಟ ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಪ್ರಶಾಂತ್ ಜತ್ತನ್, ರಮೇಶ್ ಕಾಂಚನ್, ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ವಕ್ತಾರ ಭಾಸ್ಕರ ರಾವ್ ಕಿದಿಯೂರು, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲ ಡಾ. ಸೋಜನ್ ಕೆ.ಜಿ, ಪ್ರಾಧ್ಯಾಪಕಿ ಡಾ. ನಿಕೇತನ ಹಾಗೂ ವಿದ್ಯಾರ್ಥಿಗಳು ಇದ್ದರು. 

ಕಲಾಜಾಥಾ ಅಂಗವಾಗಿ ಜಿಲ್ಲಾ ಮಟ್ಟದಿಂದ ವಿವಿಧ ಕಡೆಗಳಿಗೆ ಪ್ರಚಾರ ವಾಹನಗಳು ಹಾಗೂ ಕಲಾ ತಂಡಗಳು ತೆರಳಿ ಗ್ಯಾರಂಟಿ ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿವೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles