ಉಡುಪಿ : ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ನಡೆಸುತ್ತಿರುವ ರಾಜ್ಯ ಮಟ್ಟದ ವಿವಿಧ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿದ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ತಮ್ಮ ಶ್ರೇಷ್ಠ ಕ್ರೀಡಾ ಪ್ರದರ್ಶನದಿಂದ ರಾಷ್ಟ್ರ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಯೋಗೀಶ್ (ನೆಟ್ಬಾಲ್), ಆದಿತ್ಯ (ವಾಲಿಬಾಲ್), ಸಾಹಿಂಮ್ (ಕಬಡ್ಡಿ) ಹಾಗೂ ಪ್ರಣೀತ್ (ಕುಸ್ತಿ) ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ತೋರಿದ್ದಾರೆ.

ಈ ಸಾಧನೆಯ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿ ಸಮುದಾಯ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.



