Wednesday, March 4, 2026

spot_img

ಜಾತಿ ಗಣತಿ ವರದಿಯನ್ನು ಖುದ್ದು ಕಾಂಗ್ರೆಸ್ ಹೈಕಮಾಂಡ್ ಕಿತ್ತು ಬಿಸಾಕಿದೆ

ಉಡುಪಿ : ರಾಜ್ಯ ಸರ್ಕಾರ ತಯಾರಿಸಿದ ಜಾತಿ ಗಣತಿ ವರದಿಯನ್ನು ಖುದ್ದು ಕಾಂಗ್ರೆಸ್ ಹೈಕಮಾಂಡ್ ಕಿತ್ತು ಬಿಸಾಕಿದೆ. 150 ಕೋಟಿ ರೂ.ವೆಚ್ಚ ಮಾಡಿ ತಯಾರಿಸಿದ ಈ ವರದಿ ರಾಜ್ಯದ ತೆರಿಗೆದಾರರಿಗೆ ಮಾಡಿದ ಮಹಾಮೋಸದ ಜತೆಗೆ ಹಿಂದುಳಿದ ಹಾಗೂ ಶೋಷಿತ ಸಮುದಾಯಕ್ಕೆ ಮಾಡಿದ ಮಹಾಮೋಸವಾಗಿತ್ತು ಎಂದು ಮಾಜಿ ಶಾಸಕ ಕಾರ್ಕಳ ಸುನೀಲ್‌ ಕುಮಾರ್‌ ಹೇಳಿದ್ದಾರೆ.
ಜಾತಿ ಗಣತಿ ವರದಿಯ ದತ್ತಾಂಶದಲ್ಲಿ ಲೋಪವಿದೆ, ಇದನ್ನು ಪುನರ್ ಪರಿಶೀಲಿಸಬೇಕು ಎಂದು ಭಾರತೀಯ‌ ಜನತಾ ಪಕ್ಷ‌ ಪದೇ ಪದೇ ಆಗ್ರಹಿಸಿತ್ತು. ಆದರೆ ಸಿದ್ದರಾಮಯ್ಯನವರು ಇಂಥ ಸೂಕ್ಷ್ಮ ವಿಚಾರದಲ್ಲೂ ತಮ್ಮ‌ ಎಂದಿನ ಉಡಾಫೆಯನ್ನು ಮುಂದುವರಿಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿದ್ದರು. ನಂದಿ‌ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸುವುದಕ್ಕೂ ಮುಂದಾಗಿದ್ದರು. ಆದರೆ ಈ ವರದಿಯ ದತ್ತಾಂಶ ಸರಿಯಿಲ್ಲ, ಕಾಲಮಿತಿಯಲ್ಲಿ‌ ಮರು ಗಣತಿ ಮಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಕಿವಿ ಹಿಂಡಿ ವರದಿಯನ್ನು ಕಸದ ಬುಟ್ಟಿಗೆ ಬಿಸಾಕಿದೆ.
ಸಿದ್ದರಾಮಯ್ಯನವರಷ್ಟೇ ಅಲ್ಲ, ಕಾಂಗ್ರೆಸ್ ಹೈಕಮಾಂಡ್ ಕೂಡಾ ರಾಜ್ಯದ ಹಿಂದುಳಿದ ವರ್ಗ, ಶೋಷಿತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಸಿದ್ದರಾಮಯ್ಯನವರು ಇದೇ ವಿಚಾದವನ್ನು ಇಟ್ಟುಕೊಂಡು ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಜತೆಗೆ ಸಮುದಾಯಗಳ ಮಧ್ಯೆ ಅಸಮಧಾನ, ಬೇಸರವನ್ನು ಸೃಷ್ಟಿಸಿದ್ದರು. ಈ ಎಲ್ಲ ಅವಾಂತರಗಳ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles