Sunday, June 21, 2026

spot_img

ಜಿಲ್ಲೆಯಿಂದ ತಯಾರಾಗುವ ಯೋಗಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿ: ಯಶ್ ಪಾಲ್ ಸುವರ್ಣ

ಉಡುಪಿ : ಜಿಲ್ಲೆಯಿಂದ ತಯಾರಾಗುವ ಯೋಗಪಟುಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಯೋಗ ದಿನಾಚರಣೆ ಜಾಗತಿಕ ಮಟ್ಟದಲ್ಲಿ ಆಚರಿಸಲ್ಪಡುತ್ತಿದ್ದು, ಭಾರತೀಯ ಆರೋಗ್ಯ ಪರಂಪರೆಯ ಪ್ರಾಚೀನ ಜ್ಞಾನವನ್ನು ವಿಶ್ವಕ್ಕೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು. ಹಿರಿ-ಕಿರಿಯರೆನ್ನದೆ ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ ಒಂದು ಗಂಟೆ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಯೋಗವು ಒತ್ತಡ ನಿವಾರಣೆಗೆ ಪರಿಣಾಮಕಾರಿ ಸಾಧನವಾಗಿದ್ದು, ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರಿಗೂ ಅಗತ್ಯವಾಗಿದೆ ಎಂದರು. ಯೋಗಾಭ್ಯಾಸ ಮನಸ್ಸು ಮತ್ತು ದೇಹದ ಸಮನ್ವಯವನ್ನು ಹೆಚ್ಚಿಸುವುದರೊಂದಿಗೆ ವರ್ತಮಾನದಲ್ಲಿ ಬದುಕುವ ಕಲೆಯನ್ನು ಕಲಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯಕುಮಾರ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತನ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಆಯುಷ್ ಇಲಾಖೆ ಉಪ ನಿರ್ದೇಶಕ ಸತೀಶ್ ಆಚಾರ್ಯ ಸ್ವಾಗತಿಸಿದರು. ಹೇಮಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles