Thursday, April 2, 2026

spot_img

ಜಿ.ಎಂ. ವಿದ್ಯಾನಿಕೇತನ್‌ನಲ್ಲಿ ಬೇಸಿಗೆ ಕ್ರೀಡಾ ಶಿಬಿರಕ್ಕೆ ಚಾಲನೆ

ಉಡುಪಿ : ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಬೇಸಿಗೆ ಕ್ರೀಡಾ ಶಿಬಿರವನ್ನು ಆಯೋಜಿಸಲಾಗಿದ್ದು, ಬುಧವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡಾ ಶಿಬಿರಗಳು ಮಕ್ಕಳಲ್ಲಿ ಸ್ವತಂತ್ರ ಜೀವನ ಕೌಶಲ್ಯಗಳನ್ನು ಬೆಳೆಸುವುದರ ಜೊತೆಗೆ ಶಿಸ್ತಿನ ಜೀವನ ರೂಪಿಸಿಕೊಳ್ಳಲು ಸಹಕಾರಿ ಆಗುತ್ತವೆ. ಅಲ್ಲದೆ, ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರೊಂದಿಗೆ ತಂಡಭಾವನೆ ಮತ್ತು ಕ್ರೀಡಾಸ್ಫೂರ್ತಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಹೇಳಿದರು.

ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ, ಶಿಬಿರದ ಮೂಲಕ ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಹತ್ತು ದಿನಗಳ ಶಿಬಿರದಲ್ಲಿ ವಾಲಿಬಾಲ್, ಬಾಸ್ಕೆಟ್‌ಬಾಲ್, ಫುಟ್‌ಬಾಲ್, ಹ್ಯಾಂಡ್‌ಬಾಲ್, ತ್ರೋಬಾಲ್, ಬ್ಯಾಡ್ಮಿಂಟನ್ ಮತ್ತು ಈಜು ತರಬೇತಿಯನ್ನು ನುರಿತ ತರಬೇತುದಾರರಿಂದ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ತರಬೇತುದಾರರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles