ಉಡುಪಿ: ಡೆತ್ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಶಂಕರಪುರದ ಸಾಲ್ಮರ ಕ್ಯಾಟರಿಂಗ್ ಶೆಡ್ ಸಮೀಪ ಸಂಭವಿಸಿದೆ. ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾರೆ. ಸಾಲ್ಮರ ಕ್ಯಾಟರಿಂಗ್ ಶೆಡ್ ಬಳಿಯಿರುವ ರೂಮ್ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಘಟನಾ ಸ್ಥಳದಲ್ಲಿ ಡೆತ್ನೋಟ್ ಕೂಡ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ತಿಳಿದುಬಂದಿದೆ. ಮೃತ ಗೌತಮ್ ಪೂಜಾರಿ ಅವಿವಾಹಿತರಾಗಿದ್ದು, ಕ್ಯಾಟರಿಂಗ್ ಕ್ಷೇತ್ರದಲ್ಲಿ ಮುಖ್ಯ ಅಡುಗೆಗಾರರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸ್ವಭಾವತಃ ಎಲ್ಲರೊಂದಿಗೆ ಬೆರೆತು ನಡೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ–ಸಂಸ್ಥೆಗಳ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



