ಉಡುಪಿ : ಕೋಟೆಹೊಂಡ ರವೀಂದ್ರ ಶರಣಾಗತಿಯ ಬಳಿಕ ಉಡುಪಿ ಜಿಲ್ಲೆಯ ತೊಂಬಟ್ಟು ಮೂಲದ ತೊಂಬಟ್ಟು ಲಕ್ಷ್ಮೀ ಇಂದು ಉಡುಪಿಯ ಜಿಲ್ಲಾಧಿಕಾರಿ ಕಛೇರಿ ಮುಂಭಾಗದ ಶರಣಾಗಲಾಗಲಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿಗೆ ಸಿದ್ಧತೆ ನಡೆಸಲಾಗಿದ್ದು, ಪೂರ್ವಾಹ್ನ 11 ಗಂಟೆಗೆ ತೊಂಬೊಟ್ಟು ಲಕ್ಷ್ಮಿ ಶರಣಾಗಲಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ತೊಂಬೊಟ್ಟು ನಿವಾಸಿ ಲಕ್ಷ್ಮಿ 2006ರಿಂದ ಕಣ್ಮರೆಯಾಗಿದ್ದರು.
ಆಂಧ್ರಪ್ರದೇಶದಲ್ಲಿ ಪೊಲೀಸರಿಗೆ ಶರಣಾಗಿರುವ ನಕ್ಸಲ್ ಆರೋಪಿತ ಸಂಜೀವ ನ ಪತ್ನಿ ಯಾಗಿರುವ ಲಕ್ಷ್ಮಿ, ಪತಿಯ ಜೊತೆಗೆ ವಾಸವಾಗಿದ್ದರು. ಲಕ್ಷ್ಮಿ ವಿರುದ್ಧ ಆಂಧ್ರ ಪ್ರದೇಶದಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ, ಆದರೆ ಕರ್ನಾಟಕದಲ್ಲಿ ಲಕ್ಷ್ಮಿ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯ ಅಮಾವಾಸ್ಯೆ ಬೈಲು ಠಾಣೆಯಲ್ಲಿ ಮೂರು ಪ್ರಕರಣಗಳು ವಿಚಾರಣೆ ಬಾಕಿ ಇದ್ದು, ಇದೀಗ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಮೂಲಕ ಲಕ್ಷ್ಮಿ ಶರಣಾ ಗತಿಗೆ ಸಿದ್ಧತೆ ನಡೆಸಿದೆ.

ತೊಂಬಟ್ಟುವಿನ ಪಂಜು ಪೂಜಾರಿ ದಂಪತಿಗಳ ಆರು ಮಂದಿ ಮಕ್ಕಳಲ್ಲಿ ಒಬ್ಬಳಾದ ಲಕ್ಷ್ಮೀ, ಹೈಸ್ಕೂಲ್ ಶಿಕ್ಷಣ ಪಡೆದಿದ್ದಳು. ಗ್ರಾಮದಲ್ಲಿ ವಿವಿಧ ಸಾಮಾಜಿಕ ಚಳವಳಿಗಳಲ್ಲಿ ಮುಂಚೂಣಿಯಲ್ಲಿರುತಿದ್ದಳು. ಸಾರಾಯಿ ಅಂಗಡಿ ವಿರುದ್ಧದ ಹೋರಾಟಗಳಲ್ಲೂ ಈಕೆ ಸಕ್ರೀಯಳಾಗಿ ಭಾಗವಹಿಸಿದ್ದು, ಆ ವೇಳೆ ಪಶ್ಚಿಮಘಟ್ಟ ಭಾಗದಲ್ಲಿ ಕಾಣಿಸಿಕೊಂಡ ನಕ್ಸಲ್ ಹೋರಾಟದ ಗುಂಪಿನತ್ತ ಆಕರ್ಷಿತಳಾಗಿ ಅದನ್ನು ಸೇರಿದ್ದಳು ಎನ್ನಲಾಗಿದೆ.