ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ಸೈಟ್ http://karnatakatemplesaccommodation.com ಬದಲಿಗೆ, ಕೆಲ ಅಪರಿಚಿತರು “Karnataka Temple Accommodation” ಎಂಬ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆಯುವ ಮೂಲಕ ಭಕ್ತರನ್ನು ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಅಪರಾಧಿಗಳು ಈ ನಕಲಿ ತಾಣದ ಮೂಲಕ ಲಲಿತಾಂಬಿಕಾ ಅತಿಥಿಗೃಹದ ಕೊಠಡಿಗಳನ್ನು ಕಾಯ್ದಿರಿಸುವ ಹೆಸರಿನಲ್ಲಿ, ಭಕ್ತರಿಗೆ ವಾಟ್ಸಪ್ ಮೂಲಕ ಫೋನ್ಪೇ QR ಕೋಡ್ ಕಳುಹಿಸಿ ಹಣವನ್ನು ಪಡೆದು ನಕಲಿ ರಶೀದಿಗಳನ್ನು ನೀಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಬಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ನಕಲಿ ವೆಬ್ಸೈಟ್ ಜಾಲವನ್ನು ಪತ್ತೆಗಾಗಿ ಬಲೆ ಬೀಸಿದ್ದಾರೆ.



