Saturday, June 28, 2025

spot_img

ನಕ್ಸಲ್ ಲಕ್ಷ್ಮೀ ತೊಂಬಟ್ಟು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಕುಂದಾಪುರ: ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗಳ ಮುಂದೆ ಶರಣಾಗಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಕುಂದಾಪುರ ಪೊಲೀಸ್ ಉಪವಿಭಾಗದ ಮೂರು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ನ್ಯಾಯಾಂಗ ಬಂಧನದಲ್ಲಿದ್ದ ಲಕ್ಷ್ಮೀ ತೊಂಬಟ್ಟು ಅವರನ್ನು ಪೊಲೀಸರು ಶುಕ್ರವಾರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದರು. ಅದರಂತೆ ನ್ಯಾಯಾಧೀಶರು ಲಕ್ಷ್ಮಿ ಅವರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.

ಇದೀಗ ಪೊಲೀಸರು ಲಕ್ಷ್ಮೀ ಅವರನ್ನು ವಶಕ್ಕೆ ಪಡೆದುಕೊಂಡಿದ್ದು ಕುಂದಾಪುರ ಡಿವೈಎಸ್ಪಿ ಎಚ್.ಡಿ ಕುಲಕರ್ಣಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಅಂದಿನ ಅಮಾಸೆಬೈಲು ಠಾಣೆ ವ್ಯಾಪ್ತಿಗೊಳಪಡುವ 3 ಪ್ರಕರಣಗಳಲ್ಲಿ ಲಕ್ಷ್ಮೀ ವಿಚಾರಣೆ, ತನಿಖೆ ನಡೆಯಲಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles