Saturday, March 14, 2026

spot_img

ನಟ ಕುರಿ ಪ್ರತಾಪ್ ಶ್ರೀಕೃಷ್ಣಮಠಕ್ಕೆ ಭೇಟಿ, ಪರ್ಯಾಯ ಶ್ರೀಗಳಿಂದ ಆಶೀರ್ವಾದ..

ಉಡುಪಿ: ಮಜಾ ಟಾಕೀಸ್ ಖ್ಯಾತಿಯ ಕನ್ನಡ ಚಲನಚಿತ್ರ ಹಾಗೂ ಟಿವಿ ನಟ ಕುರಿ ಪ್ರತಾಪ್ ಅವರು ಕುಟುಂಬ ಸಮೇತರಾಗಿ ಉಡುಪಿಯ ಪ್ರಸಿದ್ಧ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಶ್ರೀಕೃಷ್ಣನ ದರ್ಶನದ ಬಳಿಕ ಅವರು ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಅವರಿಗೆ ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಮಠದ ವತಿಯಿಂದ ನಟ ಕುರಿ ಪ್ರತಾಪ್ ಹಾಗೂ ಅವರ ಕುಟುಂಬದವರನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ದೇವರ ದರ್ಶನದ ಬಳಿಕ ಅವರು ದೇವಸ್ಥಾನದ ವಿವಿಧ ಭಾಗಗಳನ್ನು ವೀಕ್ಷಿಸಿ ಧಾರ್ಮಿಕ ವಿಧಿವಿಧಾನಗಳ ಬಗ್ಗೆ ಮಾಹಿತಿಯನ್ನು ಪಡೆದರು. ಈ ವೇಳೆ ದೇವಸ್ಥಾನದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles