ಕೋಟ : 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷ ದಂತೆ ಈ ಬಾರಿಯೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರ ಪ್ರತೀ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಪಣ ತೊಟ್ಟು ದುಡಿದರೆ ಸಾಲಿಗ್ರಾಮ ಕಯಾಕಿಂಗ್ ತಂಡ ವಿಭಿನ್ನವಾಗಿ ರಾಷ್ಟ್ರ ಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ಈ ಬಾರಿಯೂ ವಿಭಿನ್ನ ಪ್ರಯತ್ನ ನಡೆಸುತ್ತಾ ಬಂದಿದೆ.
ಅಂದೊಮ್ಮೆ ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ ತಂಡ, ಮುಂದೆ ನದಿಯ ಮದ್ಯದಲ್ಲಿ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನದಿಗೆ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮವನ್ನು ಉತ್ತೇಜಿಸುವ ಪ್ರಯತ್ನ ಮಾಡಿದೆ..

ಈ ಬಾರಿ ಹೊಸತನ ಎಂಬಂತೆ ಬದುಕ ಕೊಟ್ಟ ನಾಡ ಮಣ್ಣಲಿ, ಬಂಧಗಳ ಸೇತುವೆ ಕಟ್ಟಿ, ದೇಶಭಕ್ತಿಯ ನೂಲ ಬಿಗಿದು, ನಾಡ ಹೆಮ್ಮೆ ಮೇಲೇಳುವಂತೆ, ನೀರ ಆರ್ಭಟಕೆ ಸುಂದರವಾದ ಮರದ ಸೇತುವೆ ಯೊಂದನ್ನು ಕಟ್ಟಿ ಅದರಲ್ಲಿ ಧ್ವಜವನ್ನು ಮೇಲೇರಿಸಿ ಹೊಸ ರೀತಿಯ ಆಚರಣೆಯನ್ನು ಮೆರೆದಿದೆ ತಂಡ.
ಪ್ರತೀ ಬಾರಿಯೂ ನವೀನ ಆಲೋಚನೆಗಳ ಮೂಲಕ ಕಾರ್ಯ ನಿರ್ವಹಿಸಿ ಸಮಾಜಕ್ಕೆ ಮಾದರಿಯಾಗಿ, ಪ್ರಕೃತಿ ಮಡಿಲಲ್ಲಿ ಭಾರತಾಂಬೆಯನ್ನು ನಿಲ್ಲಿಸಿ ಜನರಿಗೆ ಪ್ರಕ್ರತಿ ಪ್ರೇಮದ ಜೊತೆ ದೇಶ ಪ್ರೇಮವನ್ನು ಬೆಳೆಸಿಕೊಳ್ಳಲು ಸಂದೇಶ ನೀಡಿದರು. ಸಾಲಿಗ್ರಾಮ ಕಯಾಕಿಂಗ್ ನ ಮುಖ್ಯಸ್ಥರಾದ ಮಿಥುನ್ ಕುಮಾರ್ ಮೆಂಡನ್ & ಲೋಕೇಶ್ ಮತ್ತಿತರು ಉಪಸ್ಥಿತರಿದ್ದರು .