Thursday, August 27, 2026

spot_img

ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯವರ ಮಾಹಿತಿ ನೀಡಲು ಸೂಚನೆ

ಉಡುಪಿ : ನೇಪಾಳ–ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಹಠಾತ್ ಭೀಕರ ಜಲಪ್ರಳಯ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವವರ ಮಾಹಿತಿ ಸಂಗ್ರಹಿಸಲು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದೆ. ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ನಿವಾಸಿಗಳನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅವರ ಕುಟುಂಬಸ್ಥರ ಅನುಕೂಲಕ್ಕಾಗಿ ಜಿಲ್ಲಾಮಟ್ಟದಲ್ಲಿ ತುರ್ತು ಸಹಾಯವಾಣಿ ತೆರೆಯಲಾಗಿದೆ.

ಸಂಕಷ್ಟದಲ್ಲಿರುವವರ ಕುಟುಂಬಸ್ಥರು ಅಥವಾ ಸಂಬಂಧಿಕರು ಅವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ, ಮೊಬೈಲ್ ಸಂಖ್ಯೆ ಹಾಗೂ ಅಗತ್ಯವಿರುವ ತುರ್ತು ನೆರವಿನ ವಿವರಗಳನ್ನು ಜಿಲ್ಲಾಡಳಿತಕ್ಕೆ ತಕ್ಷಣ ನೀಡುವಂತೆ ಸೂಚಿಸಲಾಗಿದೆ. ಮಾಹಿತಿ ನೀಡಲು ಸಂಪರ್ಕಿಸಿ ಶುಲ್ಕರಹಿತ ಸಹಾಯವಾಣಿ: 1077, ದೂರವಾಣಿ: 0820-2574802, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಗೂಗಲ್ ಅರ್ಜಿ ನಮೂನೆ ಮೂಲಕವೂ ವಿವರಗಳನ್ನು ದಾಖಲಿಸಬಹುದು. ನೇಪಾಳದಲ್ಲಿರುವ ಉಡುಪಿ ಜಿಲ್ಲೆಯ ಯಾವುದೇ ವ್ಯಕ್ತಿಯ ಕುರಿತು ಮಾಹಿತಿ ಲಭ್ಯವಿದ್ದಲ್ಲಿ ವಿಳಂಬ ಮಾಡದೆ ಜಿಲ್ಲಾಡಳಿತಕ್ಕೆ ತಿಳಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles