Thursday, March 5, 2026

spot_img

ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ

ಕೋಟ: ಅನ್ಯಾಯ ಆದಾಗ ಪ್ರತಿಯೊಬ್ಬರು ಸೆಟೆದು ನಿಲ್ಲಬೇಕು. ಸ್ವಾರ್ಥ ಹೆಡಿತನ ಬಿಟ್ಟು, ಭ್ರಷ್ಟರ ದುಷ್ಟರ ಆರ್ಭಟಕ್ಕೆ ಕಡಿವಾಣ ಹಾಕಲು ನಿಷ್ಕಲ್ಮಶ ಹೋರಾಟ ಮಾಡಬೇಕು. ಮೌನ ವಹಿಸದೆ ಪ್ರಶ್ನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದ್ದಾರೆ.

 ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಸದ್ಭಾವನಾ -2025 ಶೀರ್ಷಿಕೆಯಡಿ ಕೋಟದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅವರು ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ಪಂಚವರ್ಣ ವಿಶೇಷ ಪುರಸ್ಕಾರವನ್ನು ರಥಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ಅವರಿಗೆ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಪ್ರದಾನ ಮಾಡಿದರು. ಇದೇ ವೇಳೆ ಮಾಸ್ಟರ್ ಅಥ್ಲೆಟಿಕ್ ಪಟು ಅಶ್ವಿನಿ ಅರಳಿ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ, ನಿರೂಪಕಿ ಕೋಟ ರೇವತಿ ಶೆಟ್ಟಿ ಬೆಂಗಳೂರು ಅವರನನು ಅಭಿನಂದಿಸಲಾಯಿತು.

ಬನ್ನಾಡಿ ಪದ್ದು ಆಚಾರ್ ಸ್ಮರಣಾರ್ಥ ಅಶಕ್ತ, ಆರೋಗ್ಯ ನಿಧಿ ವಿತರಣೆ, ಸಂತೋಷ್ ಕುಮಾರ್ ಕೋಟ ಇವರ ನೆನಪಿನಲ್ಲಿ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ಶೈಕ್ಷಣಿಕ ದತ್ತಿನಿಧಿ, ವಿದ್ಯಾರ್ಥಿಗಳಿಗೆ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿಯನ್ನು ವಿತರಿಸಲಾಯಿತು. ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ಆರೋಗ್ಯ ಪರಿಕರ, ಕೋಟದ ಸೇವಾಸಂಗಮ ಶಿಶುಮಂದಿರಕ್ಕೆ ಸಮವಸ್ತ್ರ ಹಸ್ತಾಂತರಿಸಲಾಯಿತು. ಬೆಂಗಳೂರು ಕ್ಯಾಪ್ಸ್ ಫೌಂಡೇಶನ್ ವತಿಯಿಂದ ಪ್ಲಾಸ್ಟಿಕ್ ಮುಕ್ತ ಸಮಾಜ ಶೀರ್ಷಿಕೆಯಡಿ ಒಂದು ಸಾವಿರ ಬಟ್ಟೆ ಕೈಚೀಲಗಳನ್ನು ಕ್ಯಾಪ್ಸ್ ಫೌಂಡೇಶನ್ ಮುಖ್ಯಸ್ಥ ಸಿಎ ಚಂದ್ರಶೇಖರ ಶೆಟ್ಟಿ, ಕೋಟ ಸಿ ಎ ಬ್ಯಾಂಕ್ ಸಿಇಓ ಶರತ್ ಕುಮಾರ್ ಶೆಟ್ಟಿ ಅವರಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.

ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಕೋಟ ಸಹಕಾರಿ ವ್ಯಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಅಭಿನಂದನಾ ನುಡಿಗಳನ್ನಾಡಿದರು. ಮುಂಬೈ ಓಎನ್‌ಜಿಸಿ ನಿವೃತ್ತ ಪ್ರಬಂಧಕ ಬನ್ನಾಡಿ ನಾರಾಯಣ ಆಚಾರ್ ಶುಭಶಂಸನೆಗೈದರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಬಡಾಮನೆ ರತ್ನಾಕರ ಶೆಟ್ಟಿ, ಉದ್ಯಮಿ ಶಂಕರ್ ಹೆಗ್ಡೆ, ಕುಂದಾಪುರ ಮಾತಾ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಕಾಶ್ ಸಿ.ತೋಳಾರ್, ಯಡಾಡಿ ಮತ್ಯಾಡಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಶೆಟ್ಟಿ, ಗುತ್ತಿಗೆದಾರ ಗುಂಡ್ಮಿ ಅವಿನಾಶ್ ಶೆಟ್ಟಿ ಬೆಂಗಳೂರು, ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ.ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ್ ಹೊಳ್ಳ, ಸಾಂಸ್ಕೃತಿಕ ಚಿಂತಕ ರಶಿರಾಜ್ ಸಾಸ್ತಾನ, ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಎಚ್.ಕುಂದರ್, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ ಉಪಸ್ಥಿತರಿದ್ದರು.

ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಕೋಟ ರೇವತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸಹಕರಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles