Tuesday, June 2, 2026

spot_img

ಬಾರ್ಕೂರು ನಿವಾಸಿ ನಾಪತ್ತೆ; ಮಾಹಿತಿ ನೀಡುವಂತೆ ಪೊಲೀಸರ ಮನವಿ

ಉಡುಪಿ : ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಬಾರ್ಕೂರು ನಿವಾಸಿ ಪ್ರತಾಪ್ ಶೆಟ್ಟಿ (42) ಅವರು ನಾಪತ್ತೆಯಾಗಿರುವ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರಿಂದ ಮಾಹಿತಿ ಕೋರಲಾಗಿದೆ.

ಪ್ರತಾಪ್ ಶೆಟ್ಟಿ ಅವರು ಏಪ್ರಿಲ್ 7ರಂದು ಬೆಂಗಳೂರಿಗೆ ಕೆಲಸಕ್ಕೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದರು. ಆದರೆ ಅವರು ಬೆಂಗಳೂರಿಗೆ ತೆರಳಿಲ್ಲ ಎಂಬುದು ಬಳಿಕ ತಿಳಿದುಬಂದಿದೆ. ಏಪ್ರಿಲ್ 13ರಂದು ಕಾಡೂರು ಹೊಳೆಯ ಸಮೀಪದ ಕಲ್ಲಿನ ಮೇಲೆ ಅವರ ಉಡುಪುಗಳು ಹಾಗೂ ಮೊಬೈಲ್ ಫೋನ್ ಪತ್ತೆಯಾಗಿದ್ದು, ಆ ಬಳಿಕ ಅವರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಾಪತ್ತೆಯಾದ ಪ್ರತಾಪ್ ಶೆಟ್ಟಿ ಅವರು ಸುಮಾರು 5 ಅಡಿ ಎತ್ತರ, ಗೋಧಿ ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಅವರು ಕನ್ನಡ, ಹಿಂದಿ ಮತ್ತು ತಮಿಳು ಭಾಷೆಗಳನ್ನು ಮಾತನಾಡಬಲ್ಲರು. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಬ್ರಹ್ಮಾವರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 0820-2461044 ಅಥವಾ ಮೊಬೈಲ್ ಸಂಖ್ಯೆ 9480805453 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles