ಬೆಂಗಳೂರು : ಆರ್.ಎಸ್.ಎಸ್. ಮತ್ತು ಪ್ರಿಯಾಂಕ್ ಖರ್ಗೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಲ್ಲಿ ಗಮನಿಸಬೇಕಾದ ವಿಚಾರ ಒಂದೇ. ಮಾನ್ಯ ಪ್ರಿಯಾಂಕ್ ಖರ್ಗೆ ಅವರು ಆರ್.ಎಸ್.ಎಸ್. ಅನ್ನು ಗುರಿಯಾಗಿಸಿಕೊಂಡು ಯಾವುದೇ ಬೇಡಿಕೆಗಳನ್ನು ಇಟ್ಟಿಲ್ಲ ಮತ್ತು ಸರ್ಕಾರಕ್ಕೆ ಪತ್ರವನ್ನು ಬರೆದಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ, ನ್ಯಾಯವಾದಿ ಅರುಣ್ ಕುಂದರ್ ಕಲ್ಗದ್ದೆ ಹೇಳಿದ್ದಾರೆ.

ಸಾರ್ವಜನಿಕ ಸಂಸ್ಥೆಗಳು ಸರ್ಕಾರಿ ಸ್ಥಳಗಳಲ್ಲಿ ಅಥವಾ ಸರ್ಕಾರಿ ಸ್ಥಳಗಳನ್ನು ಬಳಸುವಾಗ ಅನುಮತಿ ಪಡೆಯಬೇಕು ಎಂದಷ್ಟೇ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿದ್ದರು. ಸರ್ಕಾರ ಆ ನಿಟ್ಟಿನಲ್ಲಿ ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಲು ಪೂರ್ವಾನುಮತಿ ಪಡೆಯಬೇಕು ಎನ್ನುವ ಆದೇಶವನ್ನು ಹೊರಡಿಸಿದೆ. ಇಲ್ಲಿ ಸ್ಪಷ್ಟವಾಗಿ ಎಲ್ಲಿಯೂ ಕೂಡ ಆರ್.ಎಸ್.ಎಸ್. ಅನ್ನು ಟಾರ್ಗೆಟ್ ಮಾಡಿ ಈ ಹೇಳಿಕೆಯನ್ನು ಅಥವಾ ಈ ಆದೇಶವನ್ನು ಮಾಡಿರುವುದು ಕಂಡು ಬರುತ್ತಿಲ್ಲ. ಆದರೂ ಬಿಜೆಪಿ ಪಕ್ಷ ವು ಈ ವಿಚಾರವನ್ನು ಮೈಮೇಲೆ ಎಳೆದುಕೊಂಡಿದೆ. ಇಲ್ಲಿ ಒಂದು ವಿಷಯವನ್ನು ನಾವು ತಿಳಿದುಕೊಳ್ಳಬೇಕಾಗಿದೆ, ರಾಜಕೀಯವಾಗಿ ಮತ್ತು ಸೈದ್ಧಾಂತಿಕವಾಗಿ ಕಾಂಗ್ರೆಸ್ ಅನ್ನು ಸೋಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ನೇರವಾಗಿ ಕಾಂಗ್ರೆಸ್ ಸರ್ಕಾರವನ್ನು ಎದುರುಹಾಕಿಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಪರೋಕ್ಷವಾಗಿ ಆರ್.ಎಸ್.ಎಸ್. ಅನ್ನು ಮುಂದೆ ಇಟ್ಟು ಬಿಜೆಪಿ ತನ್ನ ರಾಜಕೀಯ ತಂತ್ರಗಾರಿಕೆಯನ್ನು ನಡೆಸುತ್ತಿದೆ.

ಇನ್ನು ಚಿತ್ತಾಪುರ ಕ್ಷೇತ್ರದಲ್ಲಿ ಆರ್ ಎಸ್ ಎಸ್ ಬಲಪ್ರದರ್ಶನ ಎನ್ನುವ ತಲೆಬರಹದಲ್ಲಿ ಒಂದಿಷ್ಟು ಸುದ್ದಿಗಳು ಓಡಾಡುತ್ತಿದೆ. ಇದನ್ನ ಗಮನಿಸಿದರೆ ಸ್ಪಷ್ಟವಾಗಿ ತಿಳಿದುಬರುವುದು ಒಂದೇ ಬಿಜೆಪಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಆರ್ಎಸ್ಎಸ್ ಅನ್ನ ಗುರಾಣಿಯಾಗಿ ಬಳಸಿಕೊಳ್ಳುತ್ತಿದ್ದೇವೆ ವಿನಹ ಮತ್ತೆ ಯಾವುದೇ ಕಾರಣಗಳು ಇಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಪೂರ್ವಾನುಮತಿ ಪಡೆಯಬೇಕು ಎನ್ನುವುದು ಕೇವಲ ಆರ್ ಎಸ್ಎಸ್ ಗೆ ಮಾತ್ರ ಅನ್ವಯಿಸುವುದಿಲ್ಲ ಎಲ್ಲಾ ಸಾರ್ವಜನಿಕ ಸಂಘ ಸಂಸ್ಥೆಗಳು ಕೂಡ ಇದು ಅನ್ವಯಿಸುತ್ತದೆ ಎನ್ನುವುದನ್ನು ಬಿಜೆಪಿಗರು ಮರೆತಂತಿದೆ ಎಂದಿದ್ದಾರೆ.