Friday, November 20, 2026

spot_img

ಬಿಡದಿ ಬಳಿ ಭೀಕರ ರಸ್ತೆ ಅಪಘಾತ: ಕೋಟದ ಹೋಟೆಲ್ ಉದ್ಯಮಿ ದುರ್ಮರಣ

ಉಡುಪಿ : ಬೆಂಗಳೂರಿನ ಬಿಡದಿ ಸಮೀಪ ಗುರುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕೋಟ ಪಡುಕೆರೆಯ ಹೋಟೆಲ್ ಉದ್ಯಮಿ ವಿಶ್ವನಾಥ ಎಚ್. (55) ಮೃತಪಟ್ಟಿದ್ದಾರೆ. ಮಣೂರು-ಪಡುಕೆರೆಯ ಜಟ್ಟಿಗೇಶ್ವರ ದೈವಸ್ಥಾನದ ಸಮೀಪ ನಿವಾಸಿಯಾಗಿರುವ ವಿಶ್ವನಾಥ ಅವರು, ನರಸಿಂಹ ಮೊಗವೀರ ಅವರ ಪುತ್ರ. ಬೆಂಗಳೂರಿನ ಬಿಡದಿಯಲ್ಲಿ ‘ಕರಾವಳಿ ಕಿಚನ್’ ಹೋಟೆಲ್ ನಡೆಸುತ್ತಿದ್ದ ಅವರು, ಗುರುವಾರ ರಾತ್ರಿ ಹೋಟೆಲ್‌ನ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಎದುರಿನಿಂದ ಬಂದ ಮತ್ತೊಂದು ಬೈಕ್‌ಗೆ ವಿಶ್ವನಾಥ ಅವರ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ನಿಖರ ಕಾರಣ ಹಾಗೂ ಇನ್ನೊಂದು ಬೈಕ್‌ನ ಸವಾರನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸುಮಾರು 33 ವರ್ಷಗಳ ಹಿಂದೆ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದ ವಿಶ್ವನಾಥ ಅವರು ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿ ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹುಟ್ಟೂರಿಗೆ ತರಲು ಕುಟುಂಬಸ್ಥರು ವ್ಯವಸ್ಥೆ ಮಾಡುತ್ತಿದ್ದಾರೆ. ಶನಿವಾರ ಬೆಳಿಗ್ಗೆ ಮಣೂರು-ಪಡುಕೆರೆಯಲ್ಲಿ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆಯಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles