Thursday, March 5, 2026

spot_img

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ : ಮುಂದಿನ ಬೇಸಿಗೆ ದಿನಗಳಲ್ಲಿ ಜಿಲ್ಲೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಇಲ್ಲ. ತಾಲೂಕುವಾರು ನೀಡಿರುವ ವರದಿ ಪ್ರಕಾರ ಮೇ 15ರವರೆಗೆ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಕಡಿಮೆ ಇದೆ. ಆದರೂ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮವಾಗಿ ನೀರಿನ ಕೊರತೆ ಉಂಟಾದಲ್ಲಿ ತಕ್ಷಣ ನೀರು ಸರಬರಾಜು ಮಾಡುವ ಯೋಜನೆಯನ್ನು ರೂಪಿಸಬೇಕು ಎಂದು ತಾಲೂಕು ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಿದರು.

ಮುಂಬರುವ ದಿನಗಳಲ್ಲಿ ಕಾರ್ಕಳ ತಾಲೂಕಿನ 14, ಕುಂದಾಪುರದ 36, ಬೈಂದೂರಿನ 15, ಉಡುಪಿಯ 9, ಬ್ರಹ್ಮಾವರದ 13, ಕಾಪುವಿನ 4 ಹಾಗೂ ಹೆಬ್ರಿ ತಾಲೂಕಿನ 2 ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ. ಅಲ್ಲದೆ ಸಾಲಿಗ್ರಾಮದ 5 ಹಾಗೂ ಬೈಂದೂರಿನ 19 ವಾರ್ಡ್‌ಗಳಲ್ಲಿಯೂ ನೀರಿನ ಕೊರತೆ ಸಂಭವಿಸಬಹುದು. ಈ ಹಿನ್ನೆಲೆಯಲ್ಲಿ ಪ್ರಸ್ತುತ ಬಳಕೆಯಲ್ಲಿರುವ ನೀರಿನ ಮೂಲಗಳು ಎಷ್ಟು ದಿನಗಳವರೆಗೆ ಲಭ್ಯವಾಗುತ್ತವೆ ಎಂಬುದನ್ನು ಎರಡು ದಿನಗಳೊಳಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಹಾಯಕ ಕಮಿಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles