Wednesday, October 21, 2026

spot_img

ಬೈಕಾಡಿ–ಹೇರೂರು ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆ; ಕಟಾವಿಗೆ ಬಂದ ಭತ್ತದ ಬೆಳೆ ನೀರುಪಾಲು

ಬ್ರಹ್ಮಾವರ: ಬೈಕಾಡಿ–ಹೇರೂರು ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಿದ ಪರಿಣಾಮ ಗದ್ದೆಗಳಲ್ಲಿ ನೀರು ನಿಂತು ಕಟಾವಿಗೆ ಬಂದಿದ್ದ ಭತ್ತದ ಬೆಳೆ ಸಂಪೂರ್ಣ ನೀರುಪಾಲಾದ ಘಟನೆ ರೈತರಲ್ಲಿ ಆತಂಕ ಮೂಡಿಸಿದೆ. ಈ ಅಕಾಲಿಕ ನೆರ ಹಾವಳಿ ಕುರಿತು ಸದ್ಯ ರೈತರೋರ್ವರು ಮಾಡಿದ ವಿಡಿಯೋ ವೈರಲ್‌ ಆಗಿದೆ.

ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆ ನೀರಿನಲ್ಲಿ ಮುಳುಗಿರುವುದರಿಂದ ರೈತರಿಗೆ ಭಾರೀ ನಷ್ಟ ಉಂಟಾಗುವ ಭೀತಿ ಎದುರಾಗಿದೆ. ತಿಂಗಳುಗಟ್ಟಲೆ ಶ್ರಮಪಟ್ಟು ಬೆಳೆದ ಬೆಳೆ ಕಣ್ಣೆದುರೇ ನೀರಿನಲ್ಲಿ ಮುಳುಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸುವ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಪರಿಸ್ಥಿತಿಗೆ ಕಾರಣವೇ ಎಂಬ ಪ್ರಶ್ನೆ ಸ್ಥಳೀಯರಲ್ಲಿ ಮೂಡಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿ, ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles