Monday, November 23, 2026

spot_img

ಬ್ರಹ್ಮಾವರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮಕ್ಕೆ ತೆರೆ: 14 ಶಾಲೆಗಳ 485 ವಿದ್ಯಾರ್ಥಿಗಳಿಂದ ಕಲಾಪ್ರದರ್ಶನ

ಉಡುಪಿ : ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ಹಾಗೂ ಬ್ರಹ್ಮಾವರ ಪ್ರದರ್ಶನ ಸಂಘಟನಾ ಸಮಿತಿಯ ಸಹಯೋಗದಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ಆಶ್ರಯದಲ್ಲಿ ಬ್ರಹ್ಮಾವರದ ಬಂಟರ ಭವನದ ಎದುರು ಆಯೋಜಿಸಲಾಗಿದ್ದ ‘ಕಿಶೋರ ಯಕ್ಷಗಾನ ಸಂಭ್ರಮ–2026’ಕ್ಕೆ ನ. 22ರಂದು ಸಮಾರೋಪದೊಂದಿಗೆ ತೆರೆ ಬಿದ್ದಿತು. ಬ್ರಹ್ಮಾವರದಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ 14 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು, ಒಟ್ಟು 485 ವಿದ್ಯಾರ್ಥಿಗಳು ತಮ್ಮ ಯಕ್ಷಗಾನ ಕಲಾಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ವಿಶೇಷವೆಂದರೆ ಭಾಗವಹಿಸಿದವರಲ್ಲಿ 321 ಮಂದಿ ವಿದ್ಯಾರ್ಥಿನಿಯರಾಗಿದ್ದು, ಹೆಣ್ಣುಮಕ್ಕಳ ಯಕ್ಷಗಾನಾಸಕ್ತಿ ಮತ್ತು ಸಾಧನೆ ಗಮನ ಸೆಳೆಯಿತು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಯಕ್ಷಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಮುರಳಿ ಕಡೆಕಾರ್, ಯಕ್ಷಗಾನದ ವೇಷ ಧರಿಸಿ ಪ್ರದರ್ಶನ ನೀಡುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ವಿದ್ಯಾರ್ಥಿಗಳು ಮತ್ತೊಬ್ಬರಿಗೆ ಹೇಳಿಕೊಡುವ ಮಟ್ಟಿಗೆ ಕಲೆಯಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು.

ಸಮಾರಂಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೆರೂರು, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಅಜಪುರ ಕರ್ನಾಟಕ ಸಂಘದ ಅಧ್ಯಕ್ಷ ಹಾರಾಡಿ ನಿತ್ಯಾನಂದ ಶೆಟ್ಟಿ, ನ್ಯೂ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಮಾಲಕ ಚೇತನ್ ಕುಮಾರ್ ಶೆಟ್ಟಿ, ಬ್ರಹ್ಮಾವರ ರೋಟರಿ ರಾಯಲ್ ಅಧ್ಯಕ್ಷ ಉಮಾಶಂಕರ ಶೆಟ್ಟಿ ಹಾಗೂ ಪ್ರದರ್ಶನ ಸಂಘಟನಾ ಸಮಿತಿಯ ಕಾರ್ಯದರ್ಶಿ ದೇವಾನಂದ ನಾಯಕ್ ವಿದ್ಯಾರ್ಥಿಗಳ ಕಲಾಪ್ರದರ್ಶನವನ್ನು ಶ್ಲಾಘಿಸಿದರು.

ಪ್ರದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಭಾಗವಹಿಸಿದ ಎಲ್ಲ ಶಾಲೆಗಳಿಗೆ ಪ್ರಮಾಣಪತ್ರ ಹಾಗೂ ತಂಡದ ಛಾಯಾಚಿತ್ರವನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಶೋಭಾ ಪೂಜಾರಿ ವಂದಿಸಿದರು. ಯಕ್ಷಶಿಕ್ಷಣ ಟ್ರಸ್ಟ್‌ನ ಕೋಶಾಧಿಕಾರಿ ಪ್ರಭಾಕರ ಭಂಡಿ, ಯಕ್ಷಗಾನ ಕಲಾರಂಗದ ಸದಸ್ಯರಾದ ನಾರಾಯಣ ಎಂ. ಹೆಗ್ಡೆ, ಡಾ. ರಾಜೇಶ್ ನಾವಡ, ನಾಗರಾಜ ಹೆಗ್ಡೆ ಹಾಗೂ ವಸಂತ ಆರ್. ಕಾರ್ಯಕ್ರಮದಲ್ಲಿ ಸಹಕರಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles