Thursday, November 5, 2026

spot_img

ಬ್ರಹ್ಮಾವರದ ಫಿಶ್ ಫ್ಯಾಕ್ಟರಿ ಮೇಲೆ ಅಕ್ಕ ಪಡೆ ದಾಳಿ: ಶಿಕ್ಷಣದಿಂದ ವಂಚಿತರಾಗಿದ್ದ 30 ಮಕ್ಕಳು ರಕ್ಷಣೆ

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಫಿಶ್ ಫ್ಯಾಕ್ಟರಿಯೊಂದರಲ್ಲಿ ಅಕ್ಕ ಪಡೆ ತಂಡವು ಸಿಆರ್‌ಪಿ ಹಾಗೂ ಇಸಿಒ ಇಲಾಖೆಗಳ ಸಹಯೋಗದೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಿ, ಶಿಕ್ಷಣದಿಂದ ವಂಚಿತರಾಗಿದ್ದ ಸುಮಾರು 30 ಮಕ್ಕಳನ್ನು ರಕ್ಷಿಸಿದೆ. ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮಕ್ಕಳು ಶಾಲೆಗೆ ತೆರಳದೆ, ಯಾವುದೇ ರೀತಿಯ ಶಿಕ್ಷಣ ಪಡೆಯದೆ ಫ್ಯಾಕ್ಟರಿಯ ಸುತ್ತಮುತ್ತಲೇ ಕಾಲ ಕಳೆಯುತ್ತಿರುವ ಬಗ್ಗೆ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. 6 ವರ್ಷ ಮೇಲ್ಪಟ್ಟ ಹಾಗೂ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದನ್ನು ಗಮನಿಸಿದ ಅಧಿಕಾರಿಗಳು ಮಕ್ಕಳನ್ನು ರಕ್ಷಿಸುವ ಕ್ರಮ ಕೈಗೊಂಡರು.

ರಕ್ಷಿಸಲಾದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ಬಳಿಕ 7 ಬಾಲಕಿಯರನ್ನು ಬಾಲಕಿಯರ ಬಾಲಮಂದಿರಕ್ಕೆ ಹಾಗೂ 23 ಬಾಲಕರನ್ನು ಬಾಲಕರ ಬಾಲಮಂದಿರಕ್ಕೆ ದಾಖಲಿಸುವ ಪ್ರಕ್ರಿಯೆ ನಡೆಸಲಾಯಿತು.

ಮಕ್ಕಳಿಗೆ ಕಡ್ಡಾಯ ಶಿಕ್ಷಣ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಹಾಗೂ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles