Friday, November 20, 2026

spot_img

ಬ್ರಹ್ಮಾವರ ಆಹಾರ ಮೇಳಕ್ಕೆ ಪರವಾನಿಗೆ ವಿವಾದ : ತೆರಿಗೆ ಪಾವತಿ, ನಿರಾಕ್ಷೇಪಣಾ ಪತ್ರವಿಲ್ಲದೆ ಕಾರ್ಯಕ್ರಮಕ್ಕೆ ಸಿದ್ಧತೆ!?

ಉಡುಪಿ : ಬ್ರಹ್ಮಾವರದಲ್ಲಿ ಆಯೋಜಿಸಲು ಉದ್ದೇಶಿಸಿರುವ ಆಹಾರ ಮೇಳಕ್ಕೆ ಗ್ರಾಮ ಪಂಚಾಯಿತಿಯಿಂದ ಅಗತ್ಯ ಪರವಾನಗಿ ಪಡೆಯಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಕ್ರೀಡಾ ಇಲಾಖೆಯ ಕ್ರೀಡಾಂಗಣದಲ್ಲಿ ವಾಣಿಜ್ಯ ಕಾರ್ಯಕ್ರಮ ನಡೆಸಲು ಪಂಚಾಯಿತಿ ಅನುಮತಿ ಪಡೆದಿಲ್ಲ ಮತ್ತು ಲಕ್ಷಾಂತರ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಆಕ್ಷೇಪವೂ ವ್ಯಕ್ತವಾಗಿದೆ.

ಈ ಕುರಿತು ಮಾಹಿತಿ ಹಕ್ಕು ಹೋರಾಟಗಾರರು ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ. ತೆರಿಗೆ ಪಾವತಿಸದೆ ಮತ್ತು ಆರೋಗ್ಯ ಮೇಳ ಆಯೋಜನೆಗೆ ಅಗತ್ಯವಿರುವ ನಿರಾಕ್ಷೇಪಣಾ ಪತ್ರಗಳನ್ನು ಪಡೆಯದೆ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಬಾಕಿ ತೆರಿಗೆ ವಸೂಲಿ ಮಾಡಿದ ಬಳಿಕವೇ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಜಿಲ್ಲಾಡಳಿತ ಗ್ರಾಮ ಪಂಚಾಯಿತಿಗೆ ಸೂಚಿಸಿದೆ ಎನ್ನಲಾಗಿದೆ.

ಆದರೆ, ಸಂಘಟಕರು ಉಚಿತವಾಗಿ ಕಾರ್ಯಕ್ರಮ ನಡೆಸುವುದಾಗಿ ಹೇಳಿ ತೆರಿಗೆ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಜನಪ್ರತಿನಿಧಿಗಳು ಹಾಗೂ ಗಣ್ಯರಿಂದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿಸಲಾಗುತ್ತಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಈ ನಡುವೆ ಸಾರ್ವಜನಿಕರ ಒತ್ತಡಕ್ಕೆ ಸ್ಪಂದಿಸಿರುವ ಗ್ರಾಮ ಪಂಚಾಯಿತಿ, ತೆರಿಗೆ ಪಾವತಿಸಿದ ಬಳಿಕವೇ ಕಾರ್ಯಕ್ರಮ ನಡೆಸಲು ಅವಕಾಶ ನೀಡುವುದಾಗಿ ಸಂಘಟಕರಿಗೆ ಸ್ಪಷ್ಟಪಡಿಸಿದೆ ಎನ್ನಲಾಗಿದೆ. ನಿಯಮ ಪಾಲಿಸದಿದ್ದಲ್ಲಿ ಕ್ರೀಡಾಂಗಣದ ಪ್ರವೇಶ ದ್ವಾರಕ್ಕೆ ಬೀಗ ಹಾಕುವ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles