ಉಡುಪಿ : ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಣಿಪಾಲ ಪೊಲೀಸರು ಧಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಇಮ್ರಾನ್ ಹಾಗೂ ಜೈಬಾಯ್ ಅಲಿಯಾಸ್ ಎಲಿಸಾ ಎಂದು ಗುರುತಿಸಲಾಗಿದೆ. ದಾಳಿಯ ವೇಳೆ ನೊಂದ ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡ ಸ್ಥಳಕ್ಕೆ ಧಾಳಿ ನಡೆಸಿ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತರು ತಮ್ಮ ಸ್ವಂತ ಲಾಭಕ್ಕಾಗಿ ಸೆಲೂನ್ ಅಂಡ್ ಸ್ಪಾ ಬಾಡಿ ಮಸಾಜ್ ಸೆಂಟರ್ ಹೆಸರಿನಲ್ಲಿ ಮಹಿಳೆಯರನ್ನು ಬಳಸಿ ಅನೈತಿಕ ದಂಧೆ ನಡೆಸುತ್ತಿದ್ದರೆಂದು ತನಿಖೆಯಲ್ಲಿ ಪತ್ತೆಯಾಗಿದೆ. ಜೊತೆಗೆ ಮಹೇಶ್ ಹಾಗೂ ಅಶೋಕ್ ಎಂಬವರು ಈ ವ್ಯವಹಾರಕ್ಕೆ ಸಹಕರಿಸುತ್ತಿರುವುದು ಕೂಡಾ ಬೆಳಕಿಗೆ ಬಂದಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮಣಿಪಾಲ ಪ್ರದೇಶದಲ್ಲಿ ಕೆಲವು ಮಸಾಜ್ ಪಾರ್ಲರ್ಗಳ ಹೆಸರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆಕ್ಷೇಪಗಳು ಹಲವು ಬಾರಿ ಕೇಳಿಬಂದಿದ್ದು, ಸದ್ಯ ಮಣಿಪಾಲ ಪೊಲೀಸ್ ರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ.