Monday, September 21, 2026

spot_img

ಮನೆಗೆ ಅಕ್ರಮ ಪ್ರವೇಶ ಯತ್ನ: ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ

ಉಡುಪಿ: ರಾತ್ರಿ ವೇಳೆ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಲ್ಕುಂದ ಗ್ರಾಮದ ಇಂದಿರಾ  ಅವರ ಮನೆಗೆ ಸೆ.4ರಂದು ರಾತ್ರಿ 11 ಗಂಟೆ ಸುಮಾರಿಗೆ ಕೆಲವರು ಮನೆಯ ಕಂಪೌಂಡ್‌ ಒಳಗೆ ಅಕ್ರಮವಾಗಿ ಪ್ರವೇಶಿಸಿ, ಮನೆಯೊಳಗೆ ನುಗ್ಗಲು ಅಥವಾ ಯಾವುದೋ ಕೃತ್ಯ ನಡೆಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಇದರಿಂದ ಭಯಗೊಂಡ ಇಂದಿರಾ ಅವರು ಜೋರಾಗಿ ಕೂಗಿದಾಗ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಾತ್ರಿ ಮನೆಗೆ ಬಂದಿದ್ದ ವ್ಯಕ್ತಿ ಮಿಥುನ ಎಂಬಾತನಾಗಿರುವ ಬಗ್ಗೆ ಅನುಮಾನವಿದೆ ಎಂದು ಇಂದಿರಾ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles