Wednesday, March 4, 2026

spot_img

ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆ : ಇಬ್ಬರು ಪರಾರಿ, ಒಬ್ಬ ಬಂಧನ

ಉಡುಪಿ : ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಈ ಅಕ್ರಮ ಪತ್ತೆಯಾಗಿದೆ.

 ಮನೆಯ ಮೇಲೆ ದಾಳಿ ನಡೆಸಿದ ವೇಳೆ ಆರೋಪಿಗಳಾದ ಸಾದತ್ ಮತ್ತು ಶಫತ್ ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ, ಮನೆಯಲ್ಲಿದ್ದ ಶಕೂರ್ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಈ ಇಬ್ಬರು ಆರೋಪಿಗಳು ಗೋ ಕಳ್ಳತನ ಮತ್ತು ಅಕ್ರಮ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಪೊಲೀಸರಿಗೆ ದೊರೆತಿದೆ.

ಈ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಮುಂದಿನ ತನಿಖೆಯನ್ನು ಅರಣ್ಯ ಇಲಾಖೆ ವಹಿಸಲಿದ್ದು, ಪರಾರಿಯಾದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles