ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ರಿಂದ ಬಂದಿಸಲ್ಪಟ್ಟಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ರಿಂದ ಬಂಧನಕ್ಕೆ ಒಳಗಾದ ತಕ್ಷಣ ತಿಮರೋಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸದ್ಯ ಅಗಸ್ಟ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಲಯ ಆದೇಶಿಸಿದೆ.

ಇನ್ನು ಈ ಕುರಿತು ಮಹೇಶ್ ತಿಮರೋಡಿ ವಕೀಲ ವಿಜಯವಾಸು ಪೂಜಾರಿ ಮಾಧ್ಯಮದೊಂದಿಗೆ ಮಾತನಾಡಿದ್ದು,ತಿಮರೋಡಿಯವರ ಹೇಳಿಕೆಯನ್ನ ಪೊಲೀಸರು ದಾಖಲು ಮಾಡಿದ್ದಾರೆ, ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದ ತಿಮರೋಡಿ ಅವರ ಹೈ ಬಿಪಿಗೆ ವೈದ್ಯರು ಮಾತ್ರೆ ನೀಡಿದ್ದಾರೆ. ಜಾಮೀನಉ ಅರ್ಜಿಯಲ್ಲಿ ಹೈಕೋರ್ಟ್ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಲಾಯ್ತು, ಈ ಸೆಕ್ಷನ್ ನಲ್ಲಿ ಏಳು ವರ್ಷದವರೆಗೆ ಮಾತ್ರ ಶಿಕ್ಷೆಯಿತ್ತು. ಸದ್ಯ 23 ನೇ ತಾರೀಖಿನವರೆಗೆ ನ್ಯಾಯಾಂಗ ಬಂಧನ ಇದೆ. ನಾನ್ ಬೇಲೇಬಲ್ ಸೆಕ್ಷನ್ ಇರೋದರಿಂದ ಬೇಲ್ ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಸೋಮವಾರ ಇನ್ನೊಂದು ಬಾರಿ ವಾದ-ವಿವಾದ ನಡೆಯಲಿದೆ. ಇನ್ನು ಘಟನೆ ಬಳಿಕ ಬಿ ಎಲ್ ಸಂತೋಷ್ ಎಲ್ಲಿಯೂ ಪ್ರಕರಣ ದಾಖಲು ಮಾಡಿಲ್ಲ. ಇದೇ 16ನೇ ತಾರೀಕಿಗೆ ವಿಡಿಯೋ ವೈರಲ್ ಆಗಿತ್ತು, ಆದರೆ ಈವರೆಗೂ ಎಲ್ಲೂ ಅಹಿತಕರ ಘಟನೆ ನಡೆದಿಲ್ಲ. ಆದರೂ ದೂರಿನಲ್ಲಿ ಎರಡು ಜಾಮೀನು ರಹಿತ ಸೆಕ್ಷನ್ ಹಾಕಲಾಗಿದೆ. ಶಾಂತಿ ಕದಡುವ ಯಾವುದೇ ಘಟನೆ ನಡೆದಿಲ್ಲ, ಎರಡು ಸೆಕ್ಷನ್ ನಲ್ಲಿ ಮೂರು ವರ್ಷ ಶಿಕ್ಷೆ ಮತ್ತು ದಂಡ ಇರುತ್ತದೆ. ಸೋಮವಾರ ನೂರಕ್ಕೆ ನೂರು ತಿಮರೋಡಿಗೆ ಬೇಲ್ ಸಿಗುತ್ತದೆ, ಈ ನಿಟ್ಟಿನಲ್ಲಿ ಬೇಲ್ ಗೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ. ಸದ್ಯ ಎರಡು ದಿನಗಳ ಮಟ್ಟಿಗೆ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನಲೆಯಲ್ಲಿ ಹಿಡಿಯಡಕ ಸಬ್ ಜೈಲ್ ಗೆ ಸ್ಥಳಾಂತರಿಸಲಾಗಿದೆ.