Wednesday, March 25, 2026

spot_img

ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಪೂರೈಕೆ: ಕೇಂದ್ರ ಸಚಿವರಿಗೆ ಮನವಿ

ಉಡುಪಿ: ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ವಿಶೇಷ ಕ್ರಮ ಕೈಗೊಳ್ಳುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕರಾವಳಿ ಜಿಲ್ಲೆಯ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಮೀನುಗಾರಿಕೆ ಕ್ಷೇತ್ರವು ಕಳೆದ ಕೆಲವು ದಿನಗಳಿಂದ ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಸಂಕಷ್ಟಕ್ಕೆ ಸಿಲುಕಿದೆ. ಡೀಸೆಲ್ ಕೊರತೆಯಿಂದ ಬಹುತೇಕ ಮೀನುಗಾರಿಕೆ ಚಟುವಟಿಕೆ ಸ್ಥಗಿತಗೊಂಡಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.ಈ ಪರಿಸ್ಥಿತಿ ಮುಂದುವರಿದಲ್ಲಿ ಮೀನುಗಾರರು ಮಾತ್ರವಲ್ಲದೆ ಮೀನುಗಾರಿಕೆಯನ್ನು ಪರೋಕ್ಷವಾಗಿ ಅವಲಂಬಿಸಿರುವ ಲಕ್ಷಾಂತರ ಜನರ ಜೀವನೋಪಾಯಕ್ಕೂ ತೊಂದರೆ ಉಂಟಾಗಲಿದೆ ಎಂದು ವಿವರಿಸಿದರು.

ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ದೇಶದ ಡೀಸೆಲ್ ದಾಸ್ತಾನು ಪ್ರಮಾಣಕ್ಕೆ ಅನುಗುಣವಾಗಿ ಮೀನುಗಾರಿಕಾ ವಲಯಕ್ಕೆ ಅಗತ್ಯ ಪ್ರಮಾಣದ ನಿರಂತರ ಪೂರೈಕೆಗೆ ವಿಶೇಷ ಆದ್ಯತೆ ನೀಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಮಲ್ಪೆ ಯಾರ್ಡ್ ಸಹಕಾರಿ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಕೋಟ್ಯಾನ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles