Wednesday, March 4, 2026

spot_img

ಯುವತಿಯ ಮೇಲೆ ಅತ್ಯಾಚಾರ ಯತ್ನ ದೂರು : ಹಿಂದೂ ಸಂಘಟನಾ ಕಾರ್ಯಕರ್ತನ ಬಂಧನ

ಉಡುಪಿ: ಮದುವೆಗೆ ನಿರಾಕರಿಸಿದ ಯುವತಿಯನ್ನು ಹಿಂಬಾಲಿಸಿ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯೊಂದರ ಕಾರ್ಯಕರ್ತನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯವರು ಬಂಧಿಸಿದ್ದಾರೆ. ಬಂಧಿತನನ್ನು ಪೆರ್ಡೂರು ಪ್ರದೇಶದ ನಾಯರ್‌ಕೋಡು ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರದೀಪ್ ಪೂಜಾರಿ (26) ಎಂದು ಪೊಲೀಸರು ಗುರುತಿಸಿದ್ದಾರೆ.

ಪೊಲೀಸ್‌ ಮೂಲಗಳ ಪ್ರಕಾರ, ಆರೋಪಿಯಾದ ಪ್ರದೀಪ್ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ತಡೆದು ಮದುವೆಯಾಗುವಂತೆ ಒತ್ತಾಯಿಸಿದ್ದ. ಯುವತಿ ನಿರಾಕರಿಸಿದ ಪರಿಣಾಮ ಕತ್ತು ಹಿಸುಕುವುದಾಗಿ ಬೆದರಿಸಿ ಅವಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಘಟನೆ ನಂತರ ಯುವತಿ ಮನೆಗೆ ತೆರಳಿ ವಿಷಯ ತಿಳಿಸಿದ್ದರಿಂದ, ಕುಟುಂಬಸ್ಥರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಪ್ರದೀಪ್ ಪೂಜಾರಿಯನ್ನು ತಕ್ಷಣ ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles