Friday, November 13, 2026

spot_img

ರವಿ ಪೂಜಾರಿಯ ತಾಯಿ ಸುಶೀಲಾ ಪೂಜಾರ್ತಿ ನಿಧನ: ನಾಳೆ ನೆರ್ಗಿಯಲ್ಲಿ ಅಂತ್ಯಕ್ರಿಯೆ; ಪುತ್ರನಿಗೆ ನ್ಯಾಯಾಲಯದ ಅನುಮತಿ

ಉಡುಪಿ: ಭೂಗತ ಲೋಕದಲ್ಲಿ ಕುಖ್ಯಾತಿ ಗಳಿಸಿರುವ ರವಿ ಪೂಜಾರಿಯ ತಾಯಿ ಸುಶೀಲಾ ಪೂಜಾರ್ತಿ (ಸುಮಾರು) ಗುರುವಾರ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ನಡೆಯಲಿದೆ.

ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ ಎನ್ನಲಾಗಿದ್ದು, ಹಲವು ವರ್ಷಗಳ ಬಳಿಕ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸುವ ಅವಕಾಶ ಅವರಿಗೆ ಲಭಿಸಿದೆ. ನ್ಯಾಯಾಲಯದ ಅನುಮತಿಯ ಹಿನ್ನೆಲೆಯಲ್ಲಿ ಅವರನ್ನು ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಕರೆತರುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಕಾರಾಗೃಹ ಇಲಾಖೆಯಿಂದ ಭದ್ರತೆ

ರವಿ ಪೂಜಾರಿ ಭೂಗತ ಚಟುವಟಿಕೆಗಳ ಹಿನ್ನೆಲೆ ಹಾಗೂ ಅವರ ವಿರುದ್ಧದ ಗಂಭೀರ ಪ್ರಕರಣಗಳನ್ನು ಪರಿಗಣಿಸಿ ಅಂತ್ಯಕ್ರಿಯೆ ಸಂದರ್ಭದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಕಾರಾಗೃಹ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭದ್ರತೆಯ ಜವಾಬ್ದಾರಿ ವಹಿಸಲಿದ್ದು, ಹೆಚ್ಚುವರಿಯಾಗಿ ಉಡುಪಿ ಜಿಲ್ಲಾ ಪೊಲೀಸರು ಸ್ಥಳೀಯ ಭದ್ರತೆ ಒದಗಿಸಲಿದ್ದಾರೆ.

ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಪ್ರತಿಕ್ರಿಯಿಸಿ, ಭದ್ರತಾ ವ್ಯವಸ್ಥೆಯನ್ನು ಬೆಂಗಳೂರು ಕಾರಾಗೃಹ ಇಲಾಖೆಯವರು ಒದಗಿಸಲಿದ್ದಾರೆ. ಹೆಚ್ಚುವರಿ ಸ್ಥಳೀಯ ಭದ್ರತೆಯನ್ನು ಉಡುಪಿ ಪೊಲೀಸರು ಕಲ್ಪಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನೆರ್ಗಿಯಲ್ಲಿ ಪೊಲೀಸ್ ನಿಗಾ

ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸುವ ಸಾಧ್ಯತೆಯಿದೆ. ಅಂತ್ಯಕ್ರಿಯೆಗೆ ಆಗಮಿಸುವ ಕುಟುಂಬದ ಸದಸ್ಯರು, ಸಂಬಂಧಿಕರು ಹಾಗೂ ಸಾರ್ವಜನಿಕರ ಸಂಚಾರದ ಮೇಲೆಯೂ ಪೊಲೀಸರು ನಿಗಾ ವಹಿಸಲಿದ್ದಾರೆ.

ಭೂಗತ ಲೋಕದ ಚಟುವಟಿಕೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ರವಿ ಪೂಜಾರಿಯ ಕುಟುಂಬದಲ್ಲಿ ಸಂಭವಿಸಿರುವ ಈ ದುಃಖದ ಘಟನೆ ಇದೀಗ ಕರಾವಳಿ ಭಾಗದಲ್ಲಿ ಕುತೂಹಲಕ್ಕೂ ಕಾರಣವಾಗಿದೆ. ತಾಯಿಯ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ನ್ಯಾಯಾಲಯ ನೀಡಿರುವ ಅನುಮತಿಯ ಹಿನ್ನೆಲೆಯಲ್ಲಿ ನಾಳೆ ನೆರ್ಗಿಯಲ್ಲಿ ನಡೆಯಲಿರುವ ಅಂತ್ಯಕ್ರಿಯೆ ಪೊಲೀಸ್ ಭದ್ರತೆಯೊಂದಿಗೆ ನಡೆಯಲಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles