Wednesday, March 4, 2026

spot_img

ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

ಉಡುಪಿ : ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಧಿಕಾರಿಗಳಿಗೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ, ಎಲ್ಲಾ ತಾಲೂಕುಗಳ ತಹಶೀಲ್ದಾರರಿಗೆ, ಜಿಲ್ಲಾ ಮತ್ತು ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಹಾಗೂ ಐವತ್ತಕ್ಕೂ ಅಧಿಕ ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು.

ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಅಗಸ್ಟ್ 15 ಮತ್ತು ಜನವರಿ 26ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸುತ್ತೇವೆ. ಆದರೆ ಅದೇ ದಿನ ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳು ಕಸ ಮತ್ತು ಚರಂಡಿಗಳಲ್ಲಿ ಕಾಣಸಿಗುತ್ತವೆ. ಪ್ಲಾಸ್ಟಿಕ್ ಧ್ವಜಗಳು ಬೇಗನೆ ನಾಶವಾಗುವುದಿಲ್ಲ ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ರಾಜ್ಯ ಸರಕಾರ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ತಾಲೂಕುಗಳ ತಹಶೀಲ್ದಾರರಿಗೆ ಮನವಿಯನ್ನು ನೀಡಲಾಯಿತು. ಹಾಗೂ ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜದ ಅಪಮಾನ ಅಥವಾ ಅನಾದರವಾಗುವ ಕೃತ್ಯಗಳು ಆಗದಂತೆ ಶಿಕ್ಷಣ ಅಧಿಕಾರಿಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು.

ಪ್ಲಾಸ್ಟಿಕ್ ಬಳಸಿ ರಾಷ್ಟ್ರಧ್ವಜದ ಅಪಮಾನ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆಗಳು ಮತ್ತು ಶಿಕ್ಷಣ ಇಲಾಖೆಗಳು ಸುತ್ತೋಲೆ ಹೊರಡಿಸಿದ್ದವು. ಅದರ ಪ್ರಕಾರ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಸಂವಿಧಾನ ಬಾಹಿರವಾಗಿದೆ. ಭಾವಿ ಪೀಳಿಗೆ ರಾಷ್ಟ್ರಾಭಿಮಾನಿಗಳಾಗಲಿ ಎಂಬ ಉದ್ದೇಶದಿಂದ ಸಮಿತಿಯು ಕಳೆದ 22 ವರ್ಷಗಳಿಂದ “ರಾಷ್ಟ್ರಧ್ವಜವನ್ನು ಗೌರವಿಸಿ” ಎಂಬ ಉಪಕ್ರಮವನ್ನು ಜಾರಿಗೊಳಿಸುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles